Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:8 - ಕನ್ನಡ ಸತ್ಯವೇದವು C.L. Bible (BSI)

8 ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ. ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕುಳಿತ್ತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, ನಾನು ಬಿದ್ದಿದ್ದರೂ ತಿರುಗಿ ಏಳುವೆನು. ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ ಯೆಹೋವ ದೇವರೇ ನನಗೆ ಬೆಳಕಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:8
46 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.


ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II


ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II


ನಿನ್ನ ತಮ್ಮನ ದುರ್ದಿನದಲ್ಲಿ, ಅವರ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಾ ನಿಂತಿರಬಾರದಿತ್ತು. ಯೆಹೂದ್ಯರ ವಿನಾಶದಿನದಲ್ಲಿ ಸಂತೋಷಪಡಬಾರದಿತ್ತು. ಅವರ ಸಂಕಟಕಾಲದಲ್ಲಿ ನೀನು ಹಿಗ್ಗಬಾರದಿತ್ತು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಶತ್ರುಗಳು ಹರ್ಷಿಸಬಾರದು ನನ್ನ ವಿಷಯದಲಿ I ಹಿಗ್ಗಬಾರದವರು ನಾ ಜಾರಿ ಬಿದ್ದಲ್ಲಿ II


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ನನ್ನ ವೈರಿಗೆ ಕೇಡುಬಂದಾಗ ನಾನು ಹಿಗ್ಗಿದೆನೋ? ಅವನ ವಿನಾಶಕ್ಕಾಗಿ ನಾನು ಸಂತೋಷಪಟ್ಟೆನೋ?


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”


ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.


“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.


ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.


ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.


ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II


ಕೊಂಡ ಸಾಲವನು ತೀರಿಸಲಾರನಾ ದುರ್ಜನನು I ಉದಾರವಾಗಿ ದಾನ ಧರ್ಮಮಾಳ್ಪನಾ ಸಜ್ಜನನು II


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ : ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.


ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ.


ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II


ನೀನು ಅವರಿಗೆ ಹೀಗೆ ಹೇಳಬೇಕು : “ಸರ್ವೇಶ್ವರ ಇಂತೆನ್ನುತ್ತಾರೆ : ಬಿದ್ದವರು ಮತ್ತೆ ಏಳುತ್ತಾರಲ್ಲವೆ? ಬಿಟ್ಟುಹೋದವನು ತಿರುಗಿಬರುತ್ತಾನಲ್ಲವೆ?


ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?


“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.


ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು