Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:1 - ಕನ್ನಡ ಸತ್ಯವೇದವು C.L. Bible (BSI)

1 ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚೊ ಅನಿ ಧನಿಯಾ ಜೆಜು ಕ್ರಿಸ್ತಾಚೊ ಸೆವಕ್ ಹೊವ್ನ್ ಹೊತ್ತೊ ಜಾಕೊಬ್ ಸಗ್ಳ್ಯಾ ಜಗಾತ್ ಪಗ್ಳುನ್ ಗೆಲ್ಲ್ಯಾ ಇಸ್ರಾಯೆಲಾಂಚ್ಯಾ ಬಾರಾ ಕುಳಿಯಾಂಚ್ಯಾ ಲೊಕಾಕ್ನಿ ಲಿವ್ತಲಿ ಚಿಟ್ ತುಮ್ಕಾ ಬರೆ ಹೊಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:1
41 ತಿಳಿವುಗಳ ಹೋಲಿಕೆ  

“ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು, ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿ ಮಾಡುವಾಗ ನಾನೇ ಸರ್ವೇಶ್ವರ ಎಂದು ಅವನಿಗೆ ಗೊತ್ತಾಗುವುದು.


ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :


ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.


“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!


ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ,


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ಮಾರನೆಯ ದಿನ ಪೌಲನು ನಮ್ಮನ್ನು ಕರೆದುಕೊಂಡು ಯಕೋಬನನ್ನು ನೋಡಲು ಹೋದನು. ಧರ್ಮಸಭೆಯ ಹಿರಿಯರೆಲ್ಲರೂ ಅಲ್ಲಿ ಹಾಜರಿದ್ದರು.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ಯಕೋಬನ ಕಡೆಯಿಂದ ಕೆಲವು ಸಹೋದರರು ಬರುವುದಕ್ಕೆ ಮುಂಚೆ ಆತನು ಅನ್ಯಧರ್ಮೀಯರೊಡನೆ ಊಟಮಾಡುತ್ತಿದ್ದನು. ಆದರೆ ಅವರು ಬಂದ ಮೇಲೆ ಸುನ್ನತಿ ಪರವಾದಿಗಳಿಗೆ ಅಂಜಿ ಅನ್ಯಧರ್ಮೀಯರಿಂದ ದೂರವಾದನು.


ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.


ಏಕೆಂದರೆ ಪುರಾತನ ಕಾಲದಿಂದಲೂ ಪ್ರತಿಯೊಂದು ಸಬ್ಬತ್‍ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.


ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.


ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?


ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.


ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ಇಸ್ರಯೇಲರ ಕುಲಗಳ ಸಂಖ್ಯೆಯ ಪ್ರಕಾರ ಹನ್ನೆರಡು ರತ್ನಗಳಿದ್ದವು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಲಾಗಿತ್ತು.


ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.


ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು :


ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;


ಹಾಮಾನನು ಅರಸ ಅಹಷ್ವೇರೋಷನಿಗೆ ಹೀಗೆಂದನು: “ನಿಮ್ಮ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ವಾಸಿಸುವ ಒಂದು ಜನಾಂಗವಿದೆ. ಅದು ಇತರ ಜನಾಂಗಗಳ ಮಧ್ಯೆ ಹರಡಿಕೊಂಡಿದ್ದರೂ ತನ್ನ ರೀತಿನೀತಿಗಳಲ್ಲಿ ಅವರಿಂದ ಪ್ರತ್ಯೇಕವಾಗಿಯೇ ಉಳಿಯುತ್ತದೆ. ಅರಸರ ನಿಯಮಗಳನ್ನಂತೂ ಈ ಜನಾಂಗದವರು ಅನುಸರಿಸುವುದೇ ಇಲ್ಲ. ಹೀಗಿರುವಲ್ಲಿ ಇಂಥವರನ್ನು ಅರಸರು ಸುಮ್ಮನೆ ಬಿಡುವುದು ಸರಿಯಲ್ಲ.


ಇಸ್ರಯೇಲರ ಕುಲಗಳ ಸಂಖ್ಯಾನುಸಾರ ಹನ್ನೆರಡು ರತ್ನಗಳಿರಬೇಕು. ಮುದ್ರಾ ರತ್ನದಲ್ಲಿ ಕೆತ್ತುವಂತೆ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಚಳಿಗಾಲಕ್ಕೆ ಮೊದಲೇ ಇಲ್ಲಿಗೆ ಬರಲು ಪ್ರಯತ್ನಿಸು. ಯುಬೂಲ, ಫುದೇಯ, ಲೀನ, ಕ್ಲೌದ್ಯ ಇವರು ಮತ್ತು ಇತರ ಸಹೋದರರು ನಿನಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ.


“ಮಹಾಪ್ರಭುಗಳಾದ ರಾಜ್ಯಪಾಲ ಫೆಲಿಕ್ಸ್ ಅವರ ಸನ್ನಿಧಾನಕ್ಕೆ - ಕ್ಲಾಡಿಯಲೂಸಿಯನು ಮಾಡುವ ಪ್ರಣಾಮಗಳು.


ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,


ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು


ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು