Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:10 - ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಐಶ್ವರ್ಯವಂತನಾದ ಸಹೋದರನು ತಾನು ಹೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಯಾಕಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಐಶ್ವರ್ಯವಂತನಾಗಿರುವ ವಿಶ್ವಾಸಿಯೂ ಹೆಮ್ಮೆಪಡಬೇಕು. ಏಕೆಂದರೆ ಆತ್ಮಿಕ ವಿಷಯದಲ್ಲಿ ಅವನಿಗಿರುವ ಬಡತನವನ್ನು ದೇವರು ಅವನಿಗೆ ತೋರಿಸಿಕೊಟ್ಟಿದ್ದಾನೆ. ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮೊಟೊ ಸಾವ್ಕಾರ್‍ಕಿವಂತ್ ಭಾವ್ ಅಪ್ನಿ ಕಿಳ್ ಸ್ಥಿತಿಕ್ ಯೆಲೊ ಮನುನ್ ಖುಶಿ ಹೊಂವ್ದಿತ್, ಕಶ್ಯಾಕ್ ಮಟ್ಲ್ಯಾರ್, ಮೊಟೊ ಸಾವ್ಕಾರ್‍ಕಿವಂತ್ ಮಾನುಸ್ ಗವ್ತಾಚ್ಯಾ ಫುಲ್ಲಾ ಸಾರ್ಕೊ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:10
19 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.


ಅರಳಿ ಬಾಡುವನು ಹೂವಿನಂತೆ ನಿಲ್ಲದೆ ಓಡುವನು ನೆರಳಿನಂತೆ.


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.


ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.


ಮಾನವನ ಆಯುಷ್ಕಾಲ ಹುಲ್ಲಿಗೆ ಸಮಾನ I ಹೊಲದ ಹೂವಿನಂತೆ ಅವನ ಬೆಡಗು ಬಿನ್ನಾಣ II


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಆ ವಾಣಿ ಮತ್ತೆ ಕೇಳಿಸಿತು : ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು : “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


ಅವರು ಒಣಗಿಹೋಗುವರು ಕಾಡುಗರಿಕೆಯಂತೆ I ಬೇಗ ಬಾಡಿಹೋಗುವರು ಕಾಯಿಪಲ್ಯದಂತೆ II


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು