Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:11 - ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೂರ್ಯನು ಮೇಲೇರಿದಂತೆ ಬಿಸಿಲು ಹೆಚ್ಚಾಗುವುದು. ಸೂರ್ಯನ ತಾಪದಿಂದ ಗಿಡಗಳು ಒಣಗಿಹೋಗುವವು; ಹೂವುಗಳು ಉದುರಿ ಹೋಗುವವು. ಹೂವು ಸುಂದರವಾಗಿತ್ತು, ಆದರೆ ಈಗ ಅದು ಒಣಗಿಹೋಯಿತು. ಐಶ್ವರ್ಯವಂತನಿಗೂ ಇದೇ ರೀತಿಯಾಗುವುದು. ಅವನು ತನ್ನ ವ್ಯಾಪಾರದ ಬಗ್ಗೆ ಯೋಜನೆಗಳನ್ನು ಮಾಡುತ್ತಿರುವಾಗಲೇ ಸತ್ತುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್, ದಿಸ್ ಉಗಾವಲ್ಲ್ಯಾ ತನ್ನಾ ತೊ ಅಪ್ನಾಚ್ಯಾ ಝಳಾನಿ ಗವ್ತಾಕ್ ಬಾಡುನ್ ಜಾಯ್ ಸಾರ್ಕೆ ಕರ್ತಾನಾ, ತ್ಯಾ ಗವ್ತಾಚೆ ಫುಲ್ಲ್‌ಬಿ ಝಡುನ್ ಜಾವ್ನ್ ತೆಚ್ಯಾ ರುಪಾಚೆ ಬರೆಪಾನ್ ನಾಸ್ ಹೊವ್ನ್ ಜಾತಾ. ತಸೆಚ್ ಸಾವ್ಕಾರ್ಕಿಬಿ ಅಪ್ಲ್ಯಾ ವಾಟೆ ವೈನಿ ಬಾವುನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:11
27 ತಿಳಿವುಗಳ ಹೋಲಿಕೆ  

ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು.


ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು.


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ.


ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.


ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II


ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಫಲವತ್ತಾದ ಕಣಿವೆಗೆ ಶ್ರೇಷ್ಠಶಿರೋಭೂಷಣವಾಗಿದ್ದು, ಈಗ ಬಾಡುತ್ತಿರುವ ಆ ನಗರ, ಹೂ ಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವುದು. ಆ ಹಣ್ಣನ್ನು ಕಂಡವರು ಕಿತ್ತ ಕೂಡಲೆ ತಿಂದುಬಿಡುವರು.


ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ !


ತಾಯಿಯ ಗರ್ಭದಿಂದ ಹೇಗೆ ಬರಿಗೈಯಲ್ಲಿ ಬಂದನೋ ಹಾಗೇ ಬರಿಗೈಯಲ್ಲಿ ಗತಿಸಿಹೋಗುತ್ತಾನೆ. ಅವನು ಪಟ್ಟ ಎಲ್ಲ ಪ್ರಯಾಸಕ್ಕಾಗಿ ತನ್ನ ಕೈಯಲ್ಲಿ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.


ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


ಅವರು ಒಣಗಿಹೋಗುವರು ಕಾಡುಗರಿಕೆಯಂತೆ I ಬೇಗ ಬಾಡಿಹೋಗುವರು ಕಾಯಿಪಲ್ಯದಂತೆ II


ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II


ಚಿಗುರಿ ಹೂಬಿಡುವುದದು ಬೆಳಗಿನಲಿ I ಸೊರಗಿ ತರಗಾಗುವುದು ಬೈಗಿನಲಿ II


ಮಾನವನ ಆಯುಷ್ಕಾಲ ಹುಲ್ಲಿಗೆ ಸಮಾನ I ಹೊಲದ ಹೂವಿನಂತೆ ಅವನ ಬೆಡಗು ಬಿನ್ನಾಣ II


ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?


‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.


ಎದೆಗುಂದಿದವರಾದರು ಆ ವಿದೇಶಿಯರು ತಮ್ಮ ಕೋಟೆಯಿಂದ ನಡುಗುತ್ತಾ ಹೊರಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು