Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:12 - ಕನ್ನಡ ಸತ್ಯವೇದವು C.L. Bible (BSI)

12 ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಪರಿಕ್ಷಾ ಸೊಸುನ್ ಘೆತಲೊ ಮಾನುಸ್ ಧನ್ಯ್, ತೊ ಪರಿಕ್ಷಾ ಸೊಸುನ್ ಘೆಟಲ್ಲ್ಯಾ ಮಾನಾ ಧನಿಯಾನ್ ಅಪ್ನಾಚ್ಯಾ ಪ್ರೆಮಾಚ್ಯಾ ಲೊಕಾಕ್ನಿ ದಿಲ್ಲೊ ಜಿವನಾಚೊ ಮುಕುಟ್ ಅಪ್ನಾಚೊ ಕರುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:12
49 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.


ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.


ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.


ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.


ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ!


ಕಷ್ಟಾನುಭವವೂ ಆಯಿತೆನಗೆ ಹಿತಕರ I ಅದು ತಂದಿತು ನಿನ್ನ ನಿಬಂಧನೆಗಳೆಚ್ಚರ II


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ಅಂತೆಯೇ, ಅಬ್ರಹಾಮನು ದೀರ್ಘಕಾಲ ಕಾದಿದ್ದು ದೇವರ ವಾಗ್ದಾನದ ಫಲವನ್ನು ಪಡೆದನು.


ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.


ಕಷ್ಟಾನುಭವಕೆ ಮುಂಚೆ ದಾರಿತಪ್ಪಿ ನಡೆದೆ I ಆದರೀಗ ನಡೆಯುತ್ತಿರುವೆ ನಿನ್ನ ನುಡಿಯಂತೆ II


ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.


ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.


ದೊರಕುವುದು ದೇವಾ, ನಿನ್ನಾಶೀರ್ವಾದ ಸಜ್ಜನರಿಗೆ I ಕವಚವಾದಂತಿಹುದು ನಿನ್ನ ಕರುಣೆ ಅಂಥವರಿಗೆ II ಎಂದೇ ಹರ್ಷಾನಂದಗೊಳ್ವರು ನಿನ್ನನಾಶ್ರಯಿಸಿದವರೆಲ್ಲರು I ನೀ ರಕ್ಷಿಸೆ, ಉಲ್ಲಾಸಗೊಳ್ಳುವರು ನಿನ್ನ ನಾಮಪ್ರಿಯರೆಲ್ಲರು II


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು


ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು.


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ಪರೀಕ್ಷಿಸುವನು ಪ್ರಭು ಸಜ್ಜನ ದುರ್ಜನರನು I ದ್ವೇಷಿಸುವನು ಮನಸಾರೆ ಹಿಂಸಾತ್ಮಕರನು II


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


ಸಹನೆಯು ಸದ್ಗುಣವನ್ನು, ಸದ್ಗುಣವು ನಂಬಿಕೆನಿರೀಕ್ಷೆಯನ್ನು ಬೆಳೆಸುತ್ತವೆಂದು ನಾವು ಬಲ್ಲೆವು.


ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು.


ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು