Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:17 - ಕನ್ನಡ ಸತ್ಯವೇದವು C.L. Bible (BSI)

17 ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಸಗ್ಳ್ಯಾ ಬರ್‍ಯಾ ಮನಾನ್ ದಾನ್ ಅನಿ ಸಗ್ಳಿ ಪುರಾ ಹೊಲ್ಲಿ ದೆನ್ಗಿ ದಿಸ್, ಚಂದ್ರಾಮ್ ಅನಿ ಚಿಕಿಯಾ ರಚಲ್ಲ್ಯಾಕ್ನಾ ಖಾಯ್ಲ್ ಯೆತಾ. ತೊ ಕನ್ನಾಚ್ ಬದ್ಲಿನಾ. ನಾ ಹೊಲ್ಲ್ಯಾರ್, ಕನ್ನಾಬಿ ಬದ್ಲಿನಾ. ಅದಲ್ ಬದಲ್ ಹೊತಲಿ ಸಾವ್ಳಿ ಸೈತ್ ತೆಚ್ಯಾರ್ ಪಡಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:17
62 ತಿಳಿವುಗಳ ಹೋಲಿಕೆ  

ಅದಕ್ಕೆ ಯೊವಾನ್ನನು, “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು.


ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!”


ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.


ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


“ಯಕೋಬನ ಕುಲಪುತ್ರರೇ, ನಾನು ಅದಲುಬದಲಾಗದ ಸರ್ವೇಶ್ವರ, ಈ ಕಾರಣದಿಂದ ನೀವು ಅಳಿಯದೆ ಉಳಿದಿದ್ದೀರಿ.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ನೀನು ನಿನ್ನ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಕೈಗೊಳ್ಳುವಂತೆ ಅವರು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಲಿ! ಇಸ್ರಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ!


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.


ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.


ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ.


ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.


ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”


ನಾನು ಅಲ್ಲಿಗೆ ಇಳಿದುಬಂದು ನಿನ್ನೊಡನೆ ಮಾತಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಅವರಿಗೂ ಹಂಚಿಕೊಡುವೆನು. ಆಗ ನೀನೊಬ್ಬನೇ ಈ ಜನರ ಜವಾಬ್ದಾರಿಯನ್ನು ವಹಿಸಬೇಕಾಗುವುದಿಲ್ಲ; ನಿನ್ನ ಸಂಗಡ ಇವರೂ ವಹಿಸಿಕೊಳ್ಳುವರು.


ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.


ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.


ಪ್ರಭು ಕೊಟ್ಟೇ ತೀರುವನು ಒಳಿತನು I ನಮ್ಮ ನಾಡು ನೀಡುವುದು ಬೆಳೆಯನು II


ನೀನಂತೂ ಬದಲಾಗದೆ ಇರುವೆಯಯ್ಯಾ I ನಿನ್ನ ವರುಷಗಳಿಗೆ ಮುಗಿವೇ ಇಲ್ಲವಯ್ಯಾ II


ಮಹಾ ಜ್ಯೋತಿರ್ಮಂಡಲವನು ಸೃಷ್ಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು