Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:18 - ಕನ್ನಡ ಸತ್ಯವೇದವು C.L. Bible (BSI)

18 ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರ್‍ಯಾ ಗೊಸ್ಟಿಚ್ಯಾ ವೈನಾ ದೆವಾನ್ ಅಮ್ಕಾ ಜಿವನ್ ದಿಲ್ಯಾನ್, ಅಸೆ ತೆನಿ ರಚಲ್ಲ್ಯಾ ಸಗ್ಳ್ಯಾಚ್ಯಾ ಮದ್ದಿ ಅಮಿ ಪೈಲೆಚೆ ಹೊವ್‍ಸಾಟ್ನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:18
24 ತಿಳಿವುಗಳ ಹೋಲಿಕೆ  

ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”


ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.


ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.


“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.


ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!


“ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.


ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು.


ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.


ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು