Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:22 - ಕನ್ನಡ ಸತ್ಯವೇದವು C.L. Bible (BSI)

22 ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ವಾಕ್ಯದ ಪ್ರಕಾರ ನಡೆಯುವವರಾಗಿರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರ ವಾಕ್ಯವನ್ನು ಕೇವಲ ಕೇಳುವವರಾಗಿರದೆ ಅದನ್ನು ಕಾರ್ಯರೂಪಕ್ಕೆ ತನ್ನಿರಿ. ಇಲ್ಲವಾದರೆ ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ತುಮಿ ದೆವಾಚ್ಯಾ ಗೊಸ್ಟಿ ಸಾರ್ಕೆ ಚಲ್ತಲೆ ಹೊವ್ನ್ ರ್‍ಹಾವಾ, ತೆ ಆಯಿಕ್ತಲೆ ಯೆವ್ಡೆಚ್ ಹೊವ್ನ್ ತುಮ್ಕಾಚ್ ತುಮಿ ಪಸ್ವುನ್ ಘೆವ್‍ನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:22
31 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ಒಬ್ಬನು ಒಳ್ಳೆಯದನ್ನು ಮಾಡಬೇಕೆಂದು ತಿಳಿದಿದ್ದೂ ಅದನ್ನು ಮಾಡದಿದ್ದರೆ ಅದು ಅವನಿಗೆ ಪಾಪವಾಗಿರುತ್ತದೆ.


ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.


ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


“ಯೇಸುಸ್ವಾಮಿ ನುಡಿಯುವುದನ್ನು ಕೇಳು : ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.


ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.


ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.


ಮೋಸಹೋಗದಿರಿ, ದೇವರನ್ನು ವಂಚಿಸಬಹುದೆಂದು ಭಾವಿಸದಿರಿ; ಬಿತ್ತುವುದನ್ನೇ ಕೊಯ್ಯುತ್ತೇವೆ ಎಂಬುದನ್ನು ನೆನಪಿನಲ್ಲಿಡಿ.


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”


ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.


ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.


ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.


ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.


ಸರ್ವೇಶ್ವರ ನನಗೆ : “ಜುದೇಯದ ನಗರಗಳಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ಈ ಸಮಾಚಾರವನ್ನು ಹರಡು - ಈ ಒಡಂಬಡಿಕೆಯ ವಚನಗಳನ್ನು ಕೇಳಿ ಅದರಂತೆ ನಡೆದುಕೊಳ್ಳಿರಿ.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು