ಯಾಕೋಬನು 1:25 - ಕನ್ನಡ ಸತ್ಯವೇದವು C.L. Bible (BSI)25 ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಖರೆ ಲೊಕಾಕ್ನಿ ಸುಟ್ಕಾ ಕರ್ತಲ್ಯಾ ದೆವಾಚೊ ಪುರಾ ನಿಯಮ್ ಉಶ್ಯಾರ್ಕಿನ್ ಶಿಕ್ತಲೊ ಮಾನುಸ್ ಖರೆಚ್‍ಬಿ ಖುಶಿನ್ ಭರುನ್ ರ್‍ಹಾತಾ. ತೊ ತೆ ಶಿಕುನ್ಗೆತ್ ರ್‍ಹಾತಾ ತೊ ದೆವಾಚಿ ಗೊಸ್ಟಿಯಾ ಆಯಿಕ್ತಾ ಅನಿ ಅಪ್ನಿ ಆಯ್ಕಲ್ಲೆ ಇಸ್ರಿನಾ. ತೊ ದೆವಾಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ತಾ ತಸೆ ಹೊವ್ನ್ ತೊ ಕುಶಿನ್ ಭರಲ್ಲೊ ರ್‍ಹಾತಾ. ಅಧ್ಯಾಯವನ್ನು ನೋಡಿ |