Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:26 - ಕನ್ನಡ ಸತ್ಯವೇದವು C.L. Bible (BSI)

26 ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕೊನ್ಬಿ ಅಪ್ನಿ ದೆವಸ್ಪಾನಾಚೊ ಮನುನ್ ಚಿಂತ್ತಾ ಹೊಲ್ಲ್ಯಾರ್ ಅನಿ ಅಪ್ಲ್ಯಾಚಿ ಜಿಬಿಲ್ ಸಂಬಾಳುನ್ ಘೆಯ್ನಾ, ತೊ ಅಪ್ನಾಚ್ಯಾ ಅಪ್ನಾಕುಚ್ ಪಸ್ವುನ್ ಘೆತಾ. ತೆಚ್ಯಾ ದೆವುಸ್ಪಾನಾಕ್ ಕಾಯ್ ಬಿ ಕಿಮ್ಮತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:26
37 ತಿಳಿವುಗಳ ಹೋಲಿಕೆ  

ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.


ಕಾವಲಿರಿಸು ಪ್ರಭು ನನ್ನ ಬಾಯಿಗೆ I ಪಹರೆಯಿರಲಿ ನನ್ನ ತುಟಿ ಕದಗಳಿಗೆ II


“ಆನಂದಕರ ಜೀವನದ ಬಯಕೆ ಯಾರಿಗಿದೆಯೋ ಸುದಿನಗಳನು ಕಾಣುವ ಆಶೆ ಯಾರಿಗಿದೆಯೋ ಅಂಥವನು ಬಿಗಿಹಿಡಿಯಲಿ ನಾಲಿಗೆಯನು ಕೆಟ್ಟದನು ನುಡಿಯದಂತೆ ತಡೆಹಿಡಿಯಲಿ ತುಟಿಯನು ಕಪಟವನಾಡದಂತೆ.


ಹೊಲಸು ಮಾತುಗಳು, ಬರಡು ನುಡಿಗಳು, ಕುಚೋದ್ಯ ಪದಗಳು ಯಾವುವೂ ನಿಮಗೆ ತರವಲ್ಲ. ಪ್ರತಿಯಾಗಿ, ದೇವರಿಗೆ ನೀವು ಕೃತಜ್ಞತಾಸ್ತುತಿಮಾಡಿರಿ.


ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.


ಕಾದಿಡು ನಾಲಿಗೆಯನು ಕೇಡನು ಆಡದಂತೆ I ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II


ಸಜ್ಜನರ ಬಾಯಲ್ಲಿ ಜ್ಞಾನ ಮೊಳೆಯುವುದು; ನೀಚನ ನಾಲಿಗೆಯೂ ಕತ್ತರಿಸಿ ಹೋಗುವುದು.


ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.


ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.


ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.


ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೆ ಒಯ್ಯುವ ಹಾದಿಯಾಗಬಹುದು.


“ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.


ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಇಲ್ಲವೆನ್ನದೆ ಕೊಡುವವರು ಸಜ್ಜನರು; ದಾನವೆಲ್ಲ ಬೇಕೆನ್ನುತ್ತಿರುವವನು ಜಿಪುಣನು.


ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.


ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!’ ಎಂದರು.”


ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?


ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.


ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು.


ದೈವೋಕ್ತಿ ಹೊರಡುವುದು ಅರಸನ ಬಾಯಿಂದ; ತಪ್ಪುಮಾಡದು ಅವನ ಬಾಯಿ ತೀರ್ಪು ನೀಡುವಾಗ.


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II


ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ?


ನಿಮ್ಮ ಅನುಭವಗಳೆಲ್ಲವೂ ವ್ಯರ್ಥವಾದುವು ಎಂದು ಹೇಳೋಣವೇ?


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ದೇವರಿಗೆ ವಿರುದ್ಧ ಕುದಿಯುತ್ತಿರುವೆ ಏಕೆ? ಬಾಯಿಂದ ಮಾತು ಹರಿಯುತ್ತಿವೆ ಏಕೆ?


ದೇವರು ನನ್ನ ಬಿಲ್ಲನು ಸಡಿಲಗೊಳಿಸಿ ಪೆಟ್ಟಿಗೀಡಾಗಿಸಿದ್ದಾರೆ ಅವರೋ ಕಡಿವಾಣವಿಲ್ಲದ ಕುದುರೆಗಳಂತೆ ನನ್ನ ಮುಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು