Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:27 - ಕನ್ನಡ ಸತ್ಯವೇದವು C.L. Bible (BSI)

27 ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅಮ್ಚ್ಯಾ ದೆವಾ ಬಾಬಾಚ್ಯಾ ಪರ್ಕಾರ್ ಪವಿತ್ರ್ ದೆವಸ್ಪಾನ್ ಮಟ್ಲ್ಯಾರ್, ಅನಾತ್ ಅನಿ ಘೊವ್ ಮರಲ್ಲ್ಯಾ ಬಾಯ್ಕಾಮನ್ಸಾಂಚ್ಯಾ ಕಸ್ಟಾತ್ನಿ ಪಾವ್ತಲೆ, ಅನಿ ಜಗಾತ್ಲೊ ಕೊನ್ಬಿ ತೆಂಕಾ ತರಾಸ್ ದಿ ನಸಿ ಸರ್ಕೆ ರಾಕುನ್ ಘೆವ್ನ್ ಜಾತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:27
36 ತಿಳಿವುಗಳ ಹೋಲಿಕೆ  

ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.


ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು I ದೋಷರಹಿತ ಮಾರ್ಗದಲಿ ನಡೆವವರು ಧನ್ಯರು II


ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.


ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II


ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.


ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.


ಇದಲ್ಲದೆ, ಧರ್ಮಶಾಸ್ತ್ರ ವಿಧಿಸುವುದನ್ನು ಪೂರೈಸುವುದರಿಂದ ಯಾರೂ ದೇವರೊಡನೆ ಸತ್ಸಂಬಂಧ ಪಡೆಯಲಾರರು ಎಂಬುದು ಸಹ ಸ್ಪಷ್ಟವಾಗಿದೆ. ಏಕೆಂದರೆ, “ಯಾರು ದೇವರೊಡನೆ ಸತ್ಸಂಬಂಧವನ್ನು ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.


ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.


ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.


ಪ್ರಭುವನ್ನೂ ಪರಮ ಪಿತನನ್ನೂ ಸ್ತುತಿಸುವುದು ಅದೇ ನಾಲಿಗೆಯೇ; ದೇವಸ್ವರೂಪದಲ್ಲಿ ಸೃಷ್ಟಿಸಲಾದ ಮಾನವನನ್ನು ಶಪಿಸುವುದೂ ಅದೇ ನಾಲಿಗೆಯೇ.


ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.


ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ.


ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು