Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:5 - ಕನ್ನಡ ಸತ್ಯವೇದವು C.L. Bible (BSI)

5 ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ತುಮ್ಚ್ಯಾತ್ಲ್ಯಾ ಕೊನಾಕ್ ತರಿಬಿ ಬುದ್ದ್ ಕಮ್ಮಿ ಹೊಲ್ಲಿ ರ್‍ಹಾಲ್ಯಾರ್ ತೊ ದೆವಾಕ್ಡೆ ಮಾಗುಂದಿತ್, ತೆ ತೆಕಾ ಗಾವ್ತಾ. ದೆವ್ ಮುಲಾಜೊ ಬಗಿನಸ್ತಾನಾ ಸಗ್ಳ್ಯಾಕ್ನಿ ಬರ್‍ಯಾ ಮನಾನ್ ದಿತಲೊ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:5
31 ತಿಳಿವುಗಳ ಹೋಲಿಕೆ  

“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ನಿಮ್ಮ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವುದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಇವರನ್ನು ಪರಿಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳನ್ನು ನನಗೆ ಅನುಗ್ರಹಿಸಿರಿ,” ಎಂದು ದೇವರನ್ನು ಬೇಡಿಕೊಂಡನು.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ನೀನು ನಿನ್ನ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಕೈಗೊಳ್ಳುವಂತೆ ಅವರು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಲಿ! ಇಸ್ರಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ!


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಭುತಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿದರು;


ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?


ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು