Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:10 - ಕನ್ನಡ ಸತ್ಯವೇದವು C.L. Bible (BSI)

10 ಒಬ್ಬನು ಇಡೀ ಧರ್ಮಶಾಸ್ತ್ರವನ್ನೇ ಕೈಗೊಂಡು ಒಂದೇ ಒಂದು ನಿಯಮವನ್ನು ಮೀರಿ ನಡೆದರೂ ಅವನು ಇಡೀ ಧರ್ಮಶಾಸ್ತ್ರವನ್ನೇ ಮೀರಿ ನಡೆದಂತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾಕಂದರೆ ಯಾವನಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಕಶ್ಯಾಕ್ ಮಟ್ಲ್ಯಾರ್ ಜೆ ಕೊನ್ ಸಗ್ಳಿ ಹುಕುಮಾ ಮೊಡ್ತಾ, ತೆನಿ ಸಗ್ಳ್ಯಾ ಹುಕುಮಾಂಚೊ ಲೆಕ್ ದಿವ್ಚೆ ಪಡ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:10
8 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನೂ ಇಡೀ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಲು ಬದ್ಧನಾಗಿದ್ದಾನೆ ಎಂದು ಪುನಃ ನಿಮಗೆ ನಾನು ಒತ್ತಿ ಹೇಳುತ್ತೇನೆ.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು