Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:11 - ಕನ್ನಡ ಸತ್ಯವೇದವು C.L. Bible (BSI)

11 ಏಕೆಂದರೆ, ‘ವ್ಯಭಿಚಾರ ಮಾಡಬೇಡ’ ಎಂದು ಹೇಳಿದ ದೇವರೇ, ‘ಕೊಲ್ಲಬೇಡ’ ಎಂದೂ ಹೇಳಿದ್ದಾರೆ. ನೀನು ವ್ಯಭಿಚಾರ ಮಾಡದಿದ್ದರೂ ಕೊಲೆ ಮಾಡುವವನಾದರೆ ಧರ್ಮಶಾಸ್ತ್ರವನ್ನೇ ಮೀರಿದಂತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ವ್ಯಭಿಚಾರಮಾಡಬಾರದೆಂದು ಹೇಳಿದವನೇ ನರಹತ್ಯಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಪ್ರಮಾಣವನ್ನು ಮೀರಿದವನಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ವ್ಯಭಿಚಾರ ಮಾಡಬಾರದು” ಎಂದು ದೇವರು ಹೇಳಿದನು. “ಕೊಲ್ಲಬಾರದು” ಎಂದೂ ಅದೇ ದೇವರು ಹೇಳಿದನು. ಹೀಗಿರಲಾಗಿ, ನೀವು ವ್ಯಭಿಚಾರವನ್ನು ಮಾಡದಿದ್ದರೂ ಯಾರನ್ನೇ ಆಗಲಿ ಕೊಂದರೆ, ದೇವರ ಇಡೀ ಧರ್ಮಶಾಸ್ತ್ರವನ್ನೇ ಉಲ್ಲಂಘಿಸಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಏಕೆಂದರೆ, “ವ್ಯಭಿಚಾರ ಮಾಡಬಾರದು,” ಎಂದು ಹೇಳಿದ ದೇವರೇ, “ನರಹತ್ಯೆ ಮಾಡಬಾರದು,” ಎಂತಲೂ ಹೇಳಿದರು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯೆ ಮಾಡಿದರೆ ನಿಯಮವನ್ನು ಮೀರಿದವನಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್ ವೆಬಿಚಾರ್ ಕರುನಕಾಸಿ ಮನುನ್‍ ಸಾಂಗಲ್ಯಾನುಚ್, ತುಮಿ ಕೊನಾಕ್‍ಬಿ ಜಿವಾನಿ ಮಾರುಚೆ ನ್ಹಯ್ ಮನುನ್ ಸಾಂಗಲ್ಲೆ ಹಾಯ್‍. ಅಸೆ ರ್‍ಹಾತಾನಾ ತುಮಿ ವೆಭಿಚಾರ್ ಕರುಕ್ನ್ಯಾಶಿ, ಖರೆ ಜಿವಾನಿ ಮಾರಲ್ಲೆ ಹೊಲ್ಲ್ಯಾಕ್ ತುಮಿ ಖಾಯ್ದ್ಯಾಚ್ಯಾ ವಿರೊದ್ ಹೊವ್ನ್ ಚುಕಿದಾರ್ ಹೊಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:11
11 ತಿಳಿವುಗಳ ಹೋಲಿಕೆ  

“ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.


ದೈವಾಜ್ಞೆಗಳು ನಿನಗೆ ತಿಳಿದೇ ಇವೆ; ‘ವ್ಯಭಿಚಾರ ಮಾಡಬೇಡ, ನರಹತ್ಯೆ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು’,” ಎಂದು ಯೇಸು ಅವನಿಗೆ ಉತ್ತರವಿತ್ತರು.


ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು.


“ಅವು ಯಾವುವು?” ಎಂದು ಮರುಪ್ರಶ್ನೆ ಹಾಕಿದ. ಅವನಿಗೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು


“ಇಸ್ರಯೇಲರ ಸಮಾಜವೆಲ್ಲ ತಿಳಿಯದೆ ದೋಷಿಗಳಾದರೆ, ಅಂದರೆ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರು ಮಾಡಿ ದೋಷಕ್ಕೆ ಗುರಿಯಾದರೆ,


“ಮುಖ್ಯಾಧಿಕಾರಿಯೊಬ್ಬನು ತನ್ನ ದೇವರಾದ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


“ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು