Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:14 - ಕನ್ನಡ ಸತ್ಯವೇದವು C.L. Bible (BSI)

14 ಸಹೋದರರೇ, ಒಬ್ಬನು ತನಗೆ ವಿಶ್ವಾಸ ಇದೆಯೆಂದು ಕೊಚ್ಚಿಕೊಂಡು ಅದನ್ನು ಕಾರ್ಯತಃ ವ್ಯಕ್ತಪಡಿಸದಿದ್ದರೆ ಅದರಿಂದ ಪ್ರಯೋಜನ ಏನು? ಅಂಥ ವಿಶ್ವಾಸ ಅವನನ್ನು ಉದ್ಧಾರಮಾಡಬಲ್ಲುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜವೇನು? ಅಂಥ ನಂಬಿಕೆಯು ಇವನನ್ನು ರಕ್ಷಿಸುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಸಹೋದರ ಸಹೋದರಿಯರೇ, ಒಬ್ಬ ವ್ಯಕ್ತಿಯು ತನ್ನಲ್ಲಿ ನಂಬಿಕೆಯಿದೆಯೆಂದು ಹೇಳಿಕೊಂಡರೂ ಅದನ್ನು ಕಾರ್ಯರೂಪಕ್ಕೆ ತರದಿದ್ದರೆ, ಅವನ ನಂಬಿಕೆಯಿಂದ ಪ್ರಯೋಜನವೇನೂ ಇಲ್ಲ. ಆ ರೀತಿಯ ನಂಬಿಕೆಯು ಅವನನ್ನು ರಕ್ಷಿಸಬಲ್ಲದೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಪ್ರಿಯರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾಜ್ಯಾ ಭಾವಾನು ಭೆನಿಯಾನು, ಎಕ್ ಮಾನುಸ್ ಅಪ್ನಾಕ್ ವಿಶ್ವಾಸ್ ಹಾಯ್ ಮನುನ್ ತೊಂಡಾನ್ ಸಾಂಗ್ತಾ, ಖರೆ ಕಾಮಾನಿ ದಾಕ್ವಿನಸ್ಲ್ಯಾರ್ ಕಾಯ್ ಫಾಯ್ದೊ? ತ್ಯಾ ವಿಶ್ವಾಸಾನ್ ತೆಕಾ ಸುಟ್ಕಾ ದಿವ್ಕ್ ಹೊತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:14
31 ತಿಳಿವುಗಳ ಹೋಲಿಕೆ  

ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.


ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.


ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು, ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ.


ಆತ್ಮವಿಲ್ಲದ ದೇಹವು ಸತ್ತದ್ದು; ಸತ್ಕ್ರಿಯೆಗಳಿಲ್ಲದ ವಿಶ್ವಾಸವೂ ಸತ್ತದ್ದೇ ಸರಿ.


ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಒಬ್ಬನು, “ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ,” ಎನ್ನಬಹುದು. ಅಂಥವನಿಗೆ, “ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ,” ಎಂದು ಉತ್ತರಿಸಬಹುದು.


ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. ದೇವರ ದೃಷ್ಟಿಯಲ್ಲಿ ನಿನ್ನ ಹೃದಯವು ಸರಿಯಿಲ್ಲ.


ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”


ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.


ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.


ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ಸಿಮೋನನು ಕೂಡ ವಿಶ್ವಾಸವಿಟ್ಟನು. ದೀಕ್ಷಾಸ್ನಾನವನ್ನು ಪಡೆದು ಫಿಲಿಪ್ಪನ ಸಂಗಡಿಗನಾದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕಂಡು ಬೆಕ್ಕಸಬೆರಗಾದನು.


ನಿಷ್ಪ್ರಯೋಜಕವಾದ ಹಾಗೂ ಮೋಸದ ಮಾತುಗಳಲ್ಲಿ ನೀವು ಭರವಸೆ ಇಟ್ಟಿದ್ದೀರಿ.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


ನೀನು ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ನಡೆದರೆ, ನೀನು ಮಾಡಿಸಿಕೊಂಡಿರುವ ಸುನ್ನತಿಗೆ ಅರ್ಥವಿದೆ. ಆದರೆ ನಿನ್ನ ನಡತೆ ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾಗಿದ್ದರೆ ನೀನು ಸುನ್ನತಿ ಮಾಡಿಸಿಕೊಂಡಿದ್ದರೂ ಮಾಡಿಸಿಕೊಳ್ಳದಂತೆಯೇ ಸರಿ.


“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.


ಪ್ರಿಯ ಸಹೋದರರೇ, ಮೋಸಹೋಗಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು