Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:15 - ಕನ್ನಡ ಸತ್ಯವೇದವು C.L. Bible (BSI)

15-16 ಒಂದು ವೇಳೆ ಒಬ್ಬ ಸಹೋದರನಾಗಲಿ, ಸಹೋದರಿಯಾಗಲಿ ದಿನನಿತ್ಯ ಊಟಬಟ್ಟೆಗಿಲ್ಲದೆ ಇರುವಾಗ, ನಿಮ್ಮಲ್ಲಿ ಯಾರಾದರು ಅವರಿಗೆ ಅಗತ್ಯವಾದುದನ್ನು ನೀಡದೆ, “ಹೋಗು, ಸುಖವಾಗಿ ಬಾಳು, ಚಳಿ ಕಾಯಿಸಿಕೊ, ಹೊಟ್ಟೆ ತುಂಬಾ ತಿನ್ನು,” ಎಂದು ಬರೀ ಬಾಯಿಮಾತಿನಲ್ಲಿ ಉಪಚರಿಸಿದರೆ ಅದರಿಂದಾದ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಒಬ್ಬ ಸಹೋದರನಿಗೆ ಇಲ್ಲವೇ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದೆ ಇರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ಅಥವಾ ಸಹೋದರಿಯಾಗಿರುವವಳಿಗೆ ಬಟ್ಟೆಗಳು ಬೇಕಾಗಿರಬಹುದು ಅಥವಾ ತಿನ್ನಲು ಆಹಾರ ಬೇಕಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ದಿನದ ಆಹಾರವೂ ಇಲ್ಲದಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಎಕ್ ಎಳಾರ್ ಎಕ್ ಭಾವಾಕ್ ನಾತರ್ ಭೆನಿಕ್ ನೆಸುಕ್ ಕಪ್ಡೆ ಅನಿ ದಿಸಾಚ್ಯಾ ಪೊಟಾಚೆ ಖಾನ್ ನಾ ಹೊಲ್ಯಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:15
11 ತಿಳಿವುಗಳ ಹೋಲಿಕೆ  

“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.


ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.


ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;


ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಅವರಿಗೆ ಯಾವಾಗ ಬೇಕಾದರೂ ನೀವು ಸಹಾಯ ಮಾಡಬಹುದು. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.


ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;


ಗ್ರೀಕ್ ಮಾತನಾಡುತ್ತಿದ್ದ ಯೆಹೂದ್ಯರೊಡನೆ ಸಂಭಾಷಿಸುತ್ತಾ ಅವರ ವಿರುದ್ಧ ವಾದಿಸುತ್ತಿದ್ದನು. ಅವರಾದರೋ ಅವನನ್ನು ಕೊಲ್ಲಲು ಹವಣಿಸಿದರು.


ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು