Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:20 - ಕನ್ನಡ ಸತ್ಯವೇದವು C.L. Bible (BSI)

20 ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಪ್ರಯೋಜಕನೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾಗಿದೆ ಎಂಬದಕ್ಕೆ ದೃಷ್ಟಾಂತಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬುದ್ಧಿಹೀನರೇ, ಕ್ರಿಯೆಯಿಲ್ಲದ ನಂಬಿಕೆಯು ನಿಷ್ಪ್ರಯೋಜಕವೆಂದು ನಿಮಗೆ ತೋರಿಸಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮೂರ್ಖನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಪ್ರಮಾಣಗಳು ಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅರೆ ಪಿಶ್ಯಾ ಮಾನ್ಸಾ, ಕಾಮಾ ನಸ್ತಾನಾ ಅಸಲ್ಲೊ ವಿಶ್ವಾಸ್ ಕಾಯ್ಬಿ ಫಾಯ್ದ್ಯಾಚೊ ನ್ಹಯ್ ಮನುನ್ ತುಕಾ ದಾಕ್ವುಚೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:20
16 ತಿಳಿವುಗಳ ಹೋಲಿಕೆ  

ಆತ್ಮವಿಲ್ಲದ ದೇಹವು ಸತ್ತದ್ದು; ಸತ್ಕ್ರಿಯೆಗಳಿಲ್ಲದ ವಿಶ್ವಾಸವೂ ಸತ್ತದ್ದೇ ಸರಿ.


ಸತ್ಕ್ರಿಯೆಗಳಿಲ್ಲದ ವಿಶ್ವಾಸ ಸತ್ತವಿಶ್ವಾಸವೇ ಸರಿ.


ಉತ್ತು ವ್ಯವಸಾಯ ಮಾಡುವವನು ಹೊಟ್ಟೆತುಂಬ ಉಣ್ಣುವನು; ವ್ಯರ್ಥಕಾರ್ಯಗಳಲ್ಲಿ ಆಸಕ್ತಿಯುಳ್ಳವನು ಮತಿಹೀನನು.


ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.


ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.


ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.


ಇತ್ತೀಚೆಗೆ ಅವಿಧೇಯರು, ಜೊಳ್ಳು ಮಾತಿನವರು ಹಾಗೂ ವಂಚಕಬೋಧಕರು ತಲೆ ಎತ್ತಿದ್ದಾರೆ. ಅವರಲ್ಲಿ ಕ್ರೈಸ್ತರಾಗಿರುವ ಯೆಹೂದ್ಯರು ಸಾಕಷ್ಟು ಮಂದಿ ಇದ್ದಾರೆ.


ಕೆಲವರಾದರೋ ಈ ಮಾರ್ಗವನ್ನು ಬಿಟ್ಟು ವ್ಯರ್ಥವಾದ ವಾದವಿವಾದಗಳಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ;


ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಮಾನವನಿಗೆ ದೇವರೊಡನೆ ಸತ್ಸಂಬಂಧ ದೊರಕುವುದು ಧರ್ಮಶಾಸ್ತ್ರಗಳ ನೇಮನಿಯಮಗಳನ್ನು ಪಾಲಿಸುವುದರಿಂದ ಅಲ್ಲ, ವಿಶ್ವಾಸದಿಂದಲೇ ಎಂಬುದು ನಮ್ಮ ಸಿದ್ಧಾಂತ.


ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು