ಯಾಕೋಬನು 2:3 - ಕನ್ನಡ ಸತ್ಯವೇದವು C.L. Bible (BSI)3 ಆಗ, ನೀವು ಸೊಗಸಾದ ಉಡುಪನ್ನು ಧರಿಸಿದವನಿಗೆ ಗೌರವದಿಂದ, “ಬನ್ನಿ ಸ್ವಾಮೀ ಬನ್ನಿ, ದಯವಿಟ್ಟು ಈ ಪೀಠವನ್ನು ಅಲಂಕರಿಸಿ,” ಎನ್ನುತ್ತೀರಿ. ಬಡವನಿಗೆ, “ನೀನು ಅಲ್ಲಿಯೇ ನಿಂತುಕೋ, ಇಲ್ಲವೇ ಕೆಳಗೆ, ನನ್ನ ಕಾಲ ಬಳಿ ಕುಳಿತುಕೋ,” ಎನ್ನಿತ್ತೀರಿ. ಹೀಗಿರಲು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀವು ಶೋಭಾಯಮಾನವಾದ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಮರ್ಯಾದೆಯಿಂದ ನೋಡಿ ಅವನಿಗೆ - ನೀವು ಇಲ್ಲಿ ಈ ಸುಖಾಸನದ ಮೇಲೆ ಕೂತುಕೊಳ್ಳಿರಿ ಎಂತಲೂ ಆ ಬಡಮನುಷ್ಯನಿಗೆ - ನೀನು ಅಲ್ಲಿ ನಿಂತುಕೋ, ಇಲ್ಲವೆ ನನ್ನ ಕಾಲ್ಮಣೆಯ ಹತ್ತಿರ ನೆಲದ ಮೇಲೆ ಕೂತುಕೋ ಎಂತಲೂ ಹೇಳಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಒಳ್ಳೆಯ ವಸ್ತ್ರಗಳನ್ನು ಧರಿಸಿರುವವನಿಗೆ ವಿಶೇಷ ಗಮನವನ್ನು ನೀಡುವಿರಿ. “ಉತ್ತಮವಾದ ಈ ಸ್ಥಳದಲ್ಲಿ ನೀವು ಕುಳಿತುಕೊಳ್ಳಿ” ಎಂದು ಅವನಿಗೆ ಹೇಳುವಿರಿ. ಆದರೆ ಆ ಬಡ ಮನುಷ್ಯನಿಗೆ “ಅಲ್ಲೇ ನಿಂತುಕೊ!” ಎಂದಾಗಲಿ, “ನಮ್ಮ ಪಾದಗಳ ಬಳಿ ನೆಲದ ಮೇಲೆ ಕುಳಿತುಕೊ!” ಎಂದಾಗಲಿ ಹೇಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಆ ವ್ಯಕ್ತಿಗೆ, “ನೀವು ಇಲ್ಲಿಯ ಗೌರವ ಪೀಠದಲ್ಲಿ ಕುಳಿತುಕೊಳ್ಳಿರಿ,” ಎಂತಲೂ ಆ ಬಡವನಿಗೆ, “ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ,” ಎಂತಲೂ ಹೇಳಿದರೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತರ್ ತುಮಿ ಬರೆ ಕಪ್ಡೆ ನೆಸುನ್ ಯೆಲ್ಲ್ಯಾಕ್ ಲೈ ಬರೆ ಕರ್ತ್ಯಾಸಿ ಅನಿ ಬರೆ ಹೊತ್ತ್ಯಾ ಹ್ಯಾ ಜಾಗ್ಯಾವರ್ತಿ ಬಸ್ ಮನುನ್ ತೆಕಾ ಸಾಂಗ್ತಾಸಿ, ಖರೆ ತ್ಯಾ ಗರಿಬ್ ಮಾನ್ಸಾಕ್ “ಥೈಚ್ ಇಬೆ ರ್‍ಹಾ!” ನಾತರ್, ಆಮ್ಚ್ಯಾ ಪಾಯಾಂಚ್ಯಾ ಜಗೊಳ್ ಜಿಮ್ನಿ ವರ್ತಿ ಬಸ್! ಮನುನ್ ತರ್ ಸಾಂಗ್ತ್ಯಾಶಿ. ಅಧ್ಯಾಯವನ್ನು ನೋಡಿ |