Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:4 - ಕನ್ನಡ ಸತ್ಯವೇದವು C.L. Bible (BSI)

4 ನೀವು ನಿಮ್ಮಲ್ಲೇ ಭೇದಭಾವ ಮಾಡುತ್ತೀರಿ; ಅಲ್ಲದೆ ನೀವು ಮಾಡುವ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ನಿಮ್ಮಲ್ಲಿ ಭೇದಮಾಡುವವರಾಗಿ ಅನ್ಯಾಯವಾದ ತೀರ್ಪನ್ನು ಮಾಡುವವರಾದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಮಾಡುತ್ತಿರುವುದೇನು? ಕೆಲವರನ್ನು ಇತರ ಜನರಿಗಿಂತ ಬಹಳ ಮುಖ್ಯರೆಂದು ಪರಿಗಣಿಸುತ್ತಿರುವಿರಿ. ನಿಮ್ಮ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿಗಳಾಗಿರುತ್ತೀರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಚ್ಯಾ ತುಮ್ಚ್ಯಾ ಮದ್ದಿ ಭೆದ್ ಬಾವ್ ಕರುನ್ ಹೊಲ್ಯಾ ಸಿವಾಯ್? ನಾ ತರ್ ಬುರ್ಶ್ಯಾ ಉದ್ದೆಶಾನ್ ನ್ಯಾಯ್ ನಿರ್ನಯ್ ಕರುಲ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:4
12 ತಿಳಿವುಗಳ ಹೋಲಿಕೆ  

ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.


“ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.


“ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II


ಜನನಾಯಕರೇ, ನ್ಯಾಯಬದ್ಧವೊ ನಿಮ್ಮ ತೀರ್ಪುಗಳು I ವ್ಯಾಜ್ಯಗಳನು ಬಗೆಹರಿಸುತ್ತವೆಯೆ ನಿಮ್ಮ ನಿರ್ಣಯಗಳು? II


ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ II


ಕೇಳಿ, ನಿಮ್ಮ ಆಲೋಚನೆಗಳನು ನಾನು ಬಲ್ಲೆ ನನಗೆ ವಿರುದ್ಧ ನೀವು ಮಾಡುವ ಕುಯುಕ್ತಿ ನನಗೆ ತಿಳಿದಿದೆ.


ಅನಂತರ ಪ್ರಭು ಯೇಸು, “ಈ ನೀತಿಕೆಟ್ಟ ನ್ಯಾಯಾದೀಶ ಹೇಳಿಕೊಂಡ ಮಾತುಗಳನ್ನು ಕೇಳಿದಿರಲ್ಲವೆ?


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು