ಯಾಕೋಬನು 2:5 - ಕನ್ನಡ ಸತ್ಯವೇದವು C.L. Bible (BSI)5 ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಪ್ರಿಯ ಸಹೋದರರೇ, ಕೇಳಿರಿ, ದೇವರು ಲೌಕಿಕ ವಿಷಯದಲ್ಲಿ ಬಡವರಾಗಿರುವವರನ್ನು ಆದುಕೊಂಡು ಅವರು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ನೇವಿುಸಲಿಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಮಾಜ್ಯಾ ಭಾವಾನು ಅನಿ ಭೆನಿಯಾನು ದೆವಾನ್ ಹ್ಯಾ ಜಗಾತ್ ಹ್ಯಾ ಗರಿಬಾಕ್ನಿ ವಿಶ್ವಾಸಾತ್ ಸಾವ್ಕಾರ್ ಹೊವ್ಕ್ ಸಾಟ್ನಿ ಅನಿ ಅಪ್ನಾಚೊ ಪ್ರೆಮ್ ಕರ್ತಲ್ಯಾಚ್ಯಾ ಸಾಟ್ನಿ ತೆನಿ ಗೊಸ್ಟ್ ದಿವ್ನ್ ಸಾಂಗಲ್ಲ್ಯಾ ರಾಜಾಚೊ ವಾರಿಸ್ದಾರ್ ಹೊವ್ಕ್ ಸಾಟ್ನಿ ಮನುನ್ ತೆನಿ ತೆಂಕಾ ಎಚುನ್ ಕಾಡಲ್ಲೆ ಹಾಯ್ ನ್ಹಯ್? ಅಧ್ಯಾಯವನ್ನು ನೋಡಿ |