Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:6 - ಕನ್ನಡ ಸತ್ಯವೇದವು C.L. Bible (BSI)

6 ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಕ್ಕೆ ಎಳೆದುಕೊಂಡು ಹೋಗುವವರು ಐಶ್ಚರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ತುಮಿ ತ್ಯಾ ಗರಿಬಾಕ್ನಿ ಮಾನ್ ದಿಲ್ಲ್ಯಾಸಿ ನಾ ಸಾವ್ಕಾರ್ ಲೊಕಾ ತುಮ್ಕಾ ತುಡ್ವುತಾತ್ ಅನಿ ವೊಡುನ್ ಚವ್ಕಸಿ ಕರ್ತಲ್ಯಾ ಜಾಗ್ಯಾಕ್ ನ್ಹೆತಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:6
38 ತಿಳಿವುಗಳ ಹೋಲಿಕೆ  

ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.


ತಿನ್ನಲು, ಕುಡಿಯಲು ನಿಮಗೆ ಸ್ವಂತ ಮನೆಗಳಿಲ್ಲವೇ? ನಿರ್ಗತಿಕರನ್ನು ನಾಚಿಕೆಗೀಡುಮಾಡಿ, ದೇವರ ಸಭೆಯನ್ನು ಉಪೇಕ್ಷಿಸಬೇಕೆಂದಿರುವಿರೋ? ಇದರ ಬಗ್ಗೆ ನಿಮಗೆ ನಾನು ಏನು ಹೇಳಲೀ? ನಿಮ್ಮನ್ನು ಹೊಗಳುವುದೋ, ತೆಗಳುವುದೋ? ಖಂಡಿತವಾಗಿ ನಿಮ್ಮನ್ನು ಹೊಗಳಲಾರೆ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.


ಕೆಡಿಸಬಹುದವರು ಬಡಜನರ ಯೋಜನೆಯನು I ಪ್ರಭುವಾದರೊ ಅವರಿಗೆ ಆಶ್ರಯವಾಗಿರುವನು II


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ಆಗ, ನೀವು ಸೊಗಸಾದ ಉಡುಪನ್ನು ಧರಿಸಿದವನಿಗೆ ಗೌರವದಿಂದ, “ಬನ್ನಿ ಸ್ವಾಮೀ ಬನ್ನಿ, ದಯವಿಟ್ಟು ಈ ಪೀಠವನ್ನು ಅಲಂಕರಿಸಿ,” ಎನ್ನುತ್ತೀರಿ. ಬಡವನಿಗೆ, “ನೀನು ಅಲ್ಲಿಯೇ ನಿಂತುಕೋ, ಇಲ್ಲವೇ ಕೆಳಗೆ, ನನ್ನ ಕಾಲ ಬಳಿ ಕುಳಿತುಕೋ,” ಎನ್ನಿತ್ತೀರಿ. ಹೀಗಿರಲು,


ಅವರನ್ನು ಅಲ್ಲಿ ಕಾಣದಿರಲು ಯಾಸೋನನನ್ನೂ ಕೆಲವು ಭಕ್ತವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುತಂದು, “ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ ಎಬ್ಬಿಸಿದ ಆ ವ್ಯಕ್ತಿಗಳು ಈಗ ನಮ್ಮ ನಗರಕ್ಕೂ ಬಂದಿದ್ದಾರೆ.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


ಒಬ್ಬರಿಗೊಬ್ಬರು ಪ್ರೀತಿ ಕರುಣೆಯನ್ನು ತೋರಿಸಿರಿ. ವಿಧವೆಯರು, ಅನಾಥರು, ವಿದೇಶಿಯರು, ಬಡವರು, ಇವರಾರನ್ನೂ ಶೋಷಣೆಮಾಡಬೇಡಿ. ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಹಣ ಹೆಚ್ಚಿಸಲು ಬಡವರನ್ನು ಪೀಡಿಸುವವನಿಗೆ, ಲಂಚಕೊಟ್ಟು ಬಲ್ಲಿದರನ್ನು ಒಲಿಸುವವನಿಗೆ, ಕೊರತೆಯೆ ಕಟ್ಟಿಟ್ಟ ಬುತ್ತಿ.


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ದೀನರನು ಗುಟ್ಟಾಗಿ ದಮನಮಾಡಿ ಹಿಗ್ಗುವವರಂತೆ ನನ್ನ ಚದರಿಸಲು ಬಂದರು ಅವನ ಭಟರು ಬಿರುಗಾಳಿಯಂತೆ ಅವನ ಆಯುಧಗಳಿಂದಲೆ ಅವರ ತಲೆಯನು ನೀ ಬಡಿದೆ.


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಬಲಿಯಾಗಿಹನು ಬಲತ್ಕಾರಕೆ ಅಬಲನು I ಕುಸಿದು ಬಿದ್ದಿಹನು ಜಜ್ಜರಿತವಾಗವನು II


ಊರು ಸಂದುಗೊಂದುಗಳಲೆ ಅವಿತಿದ್ದು I ನಿರ್ಗತಿಕರಿಗಾಗಿ ಅಲ್ಲೆ ಕಾದಿದ್ದು I ಕೊಲೆಗೈವನು ಮರೆಯಲ್ಲೆ ಮೇಲೆಬಿದ್ದು II


ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II


ಏಕೆಂದರೆ ಬಡವರನು ತುಳಿದು ತೊರೆದುಬಿಟ್ಟ ತಾನು ಕಟ್ಟದ ಮನೆಯನು ಕಿತ್ತುಕೊಂಡುಬಿಟ್ಟ.


ಅದಕ್ಕೆ ಯೇಸು, “ನಾನು ದೆವ್ವಹಿಡಿದವನಲ್ಲ, ನನ್ನ ಪಿತನನ್ನು ನಾನು ಗೌರವಿಸುತ್ತೇನೆ. ನೀವಾದರೋ ನನ್ನನ್ನು ಅವಮಾನಪಡಿಸುತ್ತೀರಿ.


ಬಡವರು ಮಾಡುವ ಬಿನ್ನಹ ನಮ್ರ; ಬಲ್ಲಿದರು ಕೊಡುವ ಬದಲು ಉಗ್ರ.


ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು