Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:8 - ಕನ್ನಡ ಸತ್ಯವೇದವು C.L. Bible (BSI)

8 ‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೂ ಶಾಸ್ತ್ರಕ್ಕೆ ಸರಿಯಾಗಿ ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬ ರಾಜಾಜ್ಞೆಯನ್ನು ನೀವು ನೆರವೇರಿಸುತ್ತಿದ್ದರೆ ನೀವು ಒಳ್ಳೇದನ್ನು ಮಾಡುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಿಯಾ ತುಜೊಚ್ ಪ್ರೆಮ್ ಕರಲ್ಲ್ಯಾ ಸಾರ್ಕೆ, ಸೆಜಾರ್‍ಯಾಚೊಬಿ ಪ್ರೆಮ್ ಕರ್. ಮನ್ತಲ್ಯಾ ಪವಿತ್ರ್ ಪುಸ್ತಕಾತ್ಲ್ಯಾ ಹುಕುಮಾ ಸಾರ್ಕೆ ಖಾಲ್ತಿ ಹೊವ್ನ್ ಚಲುಕ್ ಲಾಗ್ಲ್ಯಾಶಿ ಜಾಲ್ಯಾರ್, ತುಮಿ ಸಮಾ ಹೊತ್ತೆಚ್ ಕರುಕ್‍ ಲಾಗ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:8
23 ತಿಳಿವುಗಳ ಹೋಲಿಕೆ  

ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


“ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.


ವಿಮೋಚನೆಯನ್ನೀಯುವ ಧರ್ಮಶಾಸ್ತ್ರದ ನ್ಯಾಯತೀರ್ಪಿಗೆ ಗುರಿಯಾಗುವಿರಿ ಎಂದು ತಿಳಿದು ನೀವು ನಡೆಯಲ್ಲೂ ನುಡಿಯಲ್ಲೂ ಯೋಗ್ಯರಾಗಿ ಬಾಳಿ.


ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ಅವರು ನಿಮಗೆ ಸ್ವಂತನಾಡಿನವರಂತೆಯೇ ಇರಬೇಕು. ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಈಜಿಪ್ಟಿನಲ್ಲಿದ್ದಾಗ ನೀವು ಕೂಡ ಅನ್ಯರಾಗಿದ್ದಿರಲ್ಲವೆ? ನಾನು ನಿಮ್ಮ ದೇವರಾದ ಸರ್ವೇಶ್ವರ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!


ಅದಕ್ಕೆ ಸರ್ವೇಶ್ವರ, “ನೀನು ಹೀಗೆ ಸಿಟ್ಟುಗೊಳ್ಳುವುದು ಸರಿಯೇ?” ಎಂದರು.


ಅನಂತರ ಅವರು, “ಇದು ಶುಭವಾರ್ತೆಯ ದಿವಸ; ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾಗಬಹುದು. ಆದುದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತಾಡಿಕೊಂಡರು.


ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.


ಆದರೂ ನನ್ನ ಸಂಕಷ್ಟಗಳಲ್ಲಿ ಸಹಾಯ ಮಾಡಿದುದು ನಿಮ್ಮ ಸೌಜನ್ಯವೇ ಸರಿ.


ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ.


ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸುಮಾಡಿದ್ದು ಒಳ್ಳೆಯದೇ ಸರಿ.


ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


“ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”


ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು