Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:9 - ಕನ್ನಡ ಸತ್ಯವೇದವು C.L. Bible (BSI)

9 ಅದನ್ನು ಬಿಟ್ಟು ಪಕ್ಷಪಾತ ಮಾಡಿದರೆ ನೀವು ಪಾಪಮಾಡುತ್ತೀರಿ ಮತ್ತು ಧರ್ಮಶಾಸ್ತ್ರ ನಿಮ್ಮನ್ನು ಅಪರಾಧಿಗಳೆಂದು ನಿರ್ಣಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದನ್ನು ಬಿಟ್ಟು ಪಕ್ಷಪಾತ ತೋರಿಸುವವರಾಗಿದ್ದರೆ ನೀವು ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದಿಂದ ತೀರ್ಮಾನಿಸಲ್ಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದೀರಿ. ಮಾತ್ರವಲ್ಲದೆ ಮೋಶೆಯ ನಿಯಮದ ಪ್ರಕಾರ ಅಪರಾಧಿಗಳೆಂದು ನಿರ್ಣಯ ಹೊಂದುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತುಮಿ ಭೆದ್-ಭಾವ್ ಕರ್ತ್ಯಾಸಿ ಹೊಲ್ಯಾರ್, ಪಾಪ್ ಕರ್ತ್ಯಾಸಿ ಅನಿ ಖಾಯ್ದ್ಯೊ ಮೊಡಲ್ಲ್ಯಾಂಚ್ಯಾ ಸಾರ್ಕೆ ಹೊವ್ನ್ ಚುಕಿದಾರ್ ಮನುನ್ ಘೆತ್ಯಾಶಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:9
13 ತಿಳಿವುಗಳ ಹೋಲಿಕೆ  

“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.


ಪಾಪಮಾಡುವ ಪ್ರತಿಯೊಬ್ಬನೂ ದೇವರ ಆಜ್ಞೆಯನ್ನು ಮೀರುತ್ತಾನೆ. ದೇವರ ಆಜ್ಞೆಯನ್ನು ಉಲ್ಲಂಘಿಸುವುದೇ ಪಾಪ.


ಏಕೆಂದರೆ, ಈ ನೇಮನಿಯಮಗಳನ್ನು ಅನುಸರಿಸಿದ ಮಾತ್ರಕ್ಕೇ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯುವುದಿಲ್ಲ. ಧರ್ಮಶಾಸ್ತ್ರ ಮಾನವನಿಗೆ ಪಾಪಪ್ರಜ್ಞೆಯನ್ನು ಉಂಟುಮಾಡುತ್ತದೆ, ಅಷ್ಟೆ.


ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.


ನನ್ನಲ್ಲಿ ತಪ್ಪಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಆಡುವುದಾದರೆ ನನ್ನನ್ನು ನೀವು ನಂಬುವುದಿಲ್ಲವೇಕೆ?


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ಧರ್ಮಶಾಸ್ತ್ರದ ಮೂಲಕ, ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ಬದಲಾಗಿ, ಬರುವ ಅಪರಿಚಿತರ ಹಾಗೂ ಅವಿಶ್ವಾಸಿಗಳ ಮುಂದೆ ಎಲ್ಲರೂ ದೇವರ ವಾಕ್ಯವನ್ನು ಪ್ರಬೋಧಿಸಿದರೆ ಅವರಲ್ಲಿ ಒಬ್ಬನಾದರೂ ತಾನು ಕೇಳಿದ ಮಾತಿನಿಂದ ತನ್ನ ಪಾಪವನ್ನು ಒಪ್ಪಿಕೊಳ್ಳುತ್ತಾನೆ; ಅವನು ಎಲ್ಲರ ಮಾತಿನಿಂದ ತನ್ನನ್ನು ತಾನೇ ಪರೀಕ್ಷಿಸಿಕೊಳ್ಳುತ್ತಾನೆ.


ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು