Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:1 - ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ಎಲ್ಲರೂ ಬೋಧಕರಾಗಲು ಆತುರಪಡಬೇಡಿ. ಬೋಧಕರಾದ ನಾವು ಇತರರಿಗಿಂತಲೂ ತೀವ್ರವಾದ ನ್ಯಾಯವಿಚಾರಣೆಗೆ ಗುರಿಯಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿನವಾದ ತೀರ್ಪು ಆಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮ್ಚ್ಯಾತ್ ಲೈ ಲೊಕಾ, ಶಿಕ್ವುತಲೆ ಹೊತಲೆ ನಕ್ಕೊ. ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾ ಶಿಕ್ವುತಲ್ಯಾಂಚಿ ಲೈ ಬರ್ಯಾ ರಿತಿನ್ ಚವ್ಕಸಿ ಕರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:1
30 ತಿಳಿವುಗಳ ಹೋಲಿಕೆ  

ತಮ್ಮ ಮಾತಿನ ಅರ್ಥವಾಗಲಿ, ತಮ್ಮ ವಾದದ ತಿರುಳಾಗಲಿ ಅವರಿಗೆ ತಿಳಿಯದಿದ್ದರೂ ಅವರು ಧರ್ಮೋಪದೇಶಕರಾಗಲು ಹವಣಿಸುತ್ತಾರೆ.


ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ.


ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ.


ಆಗ ಯೇಸು, “ಇಸ್ರಯೇಲಿನ ಹೆಸರಾಂತ ಬೋಧಕನಾದ ನಿನಗೇ ಇದು ಅರ್ಥವಾಗಲಿಲ್ಲವೇ?


ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ.


“ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.


ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ?’ ಎಂದು ಆಕ್ಷೇಪಿಸಿದರು.


ಇಂಥ ಕೃತ್ಯವನ್ನು ಎಸಗುವವನು ಎಂಥ ಕುಟುಂಬಕ್ಕಾದರೂ ಸೇರಿರಲಿ - ಅಂಥವನನ್ನು ಸೇನಾಧೀಶ್ವರ ಸರ್ವೇಶ್ವರ ಯಕೋಬನ ಕುಲದಿಂದ ಹೊರಗೆ ಹಾಕುವರು.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ಪ್ರಿಯ ಸಹೋದರರೇ, ಮೋಸಹೋಗಬೇಡಿ.


ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ಸ್ತುತಿ ಶಾಪಗಳೆರಡೂ ಒಂದೇ ಬಾಯಿಂದ ಹೊರಡುತ್ತವೆ. ಪ್ರಿಯ ಸಹೋದರರೇ, ಇದು ತರವಲ್ಲ.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿಬಿಡುತ್ತೀರಿ. ನಟನೆಗಾಗಿ ಉದ್ದುದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತಿ ಕಠಿಣವಾದ ದಂಡನೆಗೆ ಗುರಿಯಾಗುವಿರಿ).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು