Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:10 - ಕನ್ನಡ ಸತ್ಯವೇದವು C.L. Bible (BSI)

10 ಸ್ತುತಿ ಶಾಪಗಳೆರಡೂ ಒಂದೇ ಬಾಯಿಂದ ಹೊರಡುತ್ತವೆ. ಪ್ರಿಯ ಸಹೋದರರೇ, ಇದು ತರವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದೇ ಬಾಯಿಂದ ಸ್ತುತಿ ಮತ್ತು ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದೇ ಬಾಯಿಂದ ಸ್ತುತಿ ಶಾಪ ಎರಡೂ ಬರುತ್ತವೆ. ನನ್ನ ಸಹೋದರರೇ, ಹೀಗಿರುವದು ಯೋಗ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹೊಗಳಿಕೆ ಮತ್ತು ತೆಗಳಿಕೆಗಳೆರಡೂ ಒಂದೇ ಬಾಯಿಂದ ಬರುತ್ತವೆ! ನನ್ನ ಸಹೋದರ ಸಹೋದರಿಯರೇ, ಇದು ಸಂಭವಿಸಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದೇ ಬಾಯಿಂದ ಸ್ತುತಿ ಮತ್ತು ಶಾಪ ಬರುತ್ತವೆ. ನನ್ನ ಪ್ರಿಯರೇ, ಇವುಗಳು ಹೀಗಿರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಾಜ್ಯಾ ಭಾವಾ ಭೆನಿಯಾನು, ಅಸೆ ರ್‍ಹಾವ್ಚೆ ನ್ಹಯ್. ಬಗಾ ಧನ್ಯವಾದಾಚಿ ಗೊಸ್ಟಿಯಾ ಅನಿ ಸರಾಪ್ ಎಕುಚ್ ತೊಂಡಾತ್ನಾ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:10
14 ತಿಳಿವುಗಳ ಹೋಲಿಕೆ  

ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ. ಹೌದು, ಶಪಿಸದೆ ಆಶೀರ್ವದಿಸಿರಿ.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಅನಂತರ ಅವನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಮಾಡಿದ್ದೇನು? ಯಾವ ತಪ್ಪಿಗಾಗಿ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಈ ಮಹಾ ಪಾತಕಕ್ಕೆ ಒಳಪಡಿಸಿದೆ? ಮಾಡಬಾರದ ಕಾರ್ಯವನ್ನು ನೀನು ಮಾಡಿದೆ,” ಎಂದು ಹೇಳಿದನು.


ಆಕೆ, “ಅಣ್ಣಾ, ಬೇಡ; ನನ್ನನ್ನು ಕೆಡಿಸಬೇಡ; ಇಸ್ರಯೇಲರಲ್ಲಿ ಇಂಥದು ನಡೆಯಬಾರದು.


ಪ್ರಿಯ ಸಹೋದರರೇ, ಮೋಸಹೋಗಬೇಡಿ.


ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.


ಸಹೋದರರೇ, ಎಲ್ಲರೂ ಬೋಧಕರಾಗಲು ಆತುರಪಡಬೇಡಿ. ಬೋಧಕರಾದ ನಾವು ಇತರರಿಗಿಂತಲೂ ತೀವ್ರವಾದ ನ್ಯಾಯವಿಚಾರಣೆಗೆ ಗುರಿಯಾಗುತ್ತೇವೆ.


ಪ್ರಭುವನ್ನೂ ಪರಮ ಪಿತನನ್ನೂ ಸ್ತುತಿಸುವುದು ಅದೇ ನಾಲಿಗೆಯೇ; ದೇವಸ್ವರೂಪದಲ್ಲಿ ಸೃಷ್ಟಿಸಲಾದ ಮಾನವನನ್ನು ಶಪಿಸುವುದೂ ಅದೇ ನಾಲಿಗೆಯೇ.


ಒಂದೇ ಬುಗ್ಗೆಯಿಂದ ಸಿಹಿ ನೀರು, ಸೌಳು ನೀರು - ಎರಡೂ ಬರುವುದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು