Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:12 - ಕನ್ನಡ ಸತ್ಯವೇದವು C.L. Bible (BSI)

12 ಅಂಜೂರದ ಮರ ಓಲಿವ್ ಹಣ್ಣನ್ನು ಕೊಡುವುದುಂಟೇ? ದ್ರಾಕ್ಷಿಯ ಬಳ್ಳಿಯಲ್ಲಿ ಅಂಜೂರ ಸಿಕ್ಕೀತೇ? ಎಂದಿಗೂ ಇಲ್ಲ. ಅಂತೆಯೇ ಸೌಳು ನೀರಿನ ಒರತೆಯಿಂದ ಸಿಹಿ ನೀರು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇ ಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಉಪ್ಪುನೀರಿನ ಬಾವಿಯಿಂದ ಸಿಹಿನೀರು ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಸಹೋದರ ಸಹೋದರಿಯರೇ, ಅಂಜೂರದ ಮರವು ಆಲಿವ್ ಕಾಯಿಗಳನ್ನು ಬಿಡುವುದೇ? ಇಲ್ಲ! ದ್ರಾಕ್ಷಿಬಳ್ಳಿಯು ಅಂಜೂರದ ಹಣ್ಣನ್ನು ಬಿಡುವುದೇ? ಇಲ್ಲ! ಉಪ್ಪು ನೀರಿನಿಂದ ತುಂಬಿದ ಬಾವಿಯು ಸಿಹಿ ನೀರನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಪ್ರಿಯರೇ, ಅಂಜೂರದ ಮರವು ಎಣ್ಣೇಮರದ ಕಾಯನ್ನು ಬಿಡುವುದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಉಪ್ಪುನೀರಿನ ಬುಗ್ಗೆಯು ಸಿಹಿನೀರನ್ನು ಕೊಡಲು ಎಂದಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾಜ್ಯಾ ಭಾವ್ ಭೆನಿಯಾನು, ಎಕ್ ಅಂಜುರಾಚೆ ಝಾಡ್ ಆಲಿವಾಚೆ ಫಳ್ ದಿವ್ಕ್ ಹೊಯ್ನಾ; ಎಕ್ ದ್ರಾಕ್ಷಿಚ್ಯಾ ಯೆಲಿನ್ ಅಂಜುರಾಚಿ ಫಳಾ ದಿವ್ಕ್ ಹೊಯ್ನಾ ನಾಹೊಲ್ಯಾರ್ ಎಕ್ ಖಾರ್ ಪಾನಿಯಾಚ್ಯಾ ಝರ್ಯಾನ್ ಗೊಡ್ಲೆ ಪಾನಿ ದಿವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:12
11 ತಿಳಿವುಗಳ ಹೋಲಿಕೆ  

“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.


ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


ಒಂದೇ ಬುಗ್ಗೆಯಿಂದ ಸಿಹಿ ನೀರು, ಸೌಳು ನೀರು - ಎರಡೂ ಬರುವುದುಂಟೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು