Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:17 - ಕನ್ನಡ ಸತ್ಯವೇದವು C.L. Bible (BSI)

17 ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ ವೈನಾ ಯೆಲ್ಲಿ ಬುದ್ವಂತ್ಕಿ; ಸಾದಿ, ಶಾಂತ್ಪಾನಾಚಿ, ಸೊಸುನ್ ಘೆತಲಿ, ನಾಜುಕ್ ಮನಾಚಿ, ದಯಾ ಅನಿ ಬರ್‍ಯಾ ಕಾಮಾಚ್ಯಾ ವರ್ತಿ ಠಿಕುನ್ ರಾತಲಿ, ತಿ ಭೆದ್ ಭಾವ್ ಕರಿನಾ ಅನಿ ಕುಸ್ಡೆಪಾನ್ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:17
63 ತಿಳಿವುಗಳ ಹೋಲಿಕೆ  

ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಪ್ರಭುವಿನ ಶರಣನಿಗೆ ಜಗಳ ಸಲ್ಲದು. ಆತನು ಎಲ್ಲರೊಡನೆ ಸೌಹಾರ್ದದಿಂದ ನಡೆದುಕೊಳ್ಳಬೇಕು.


ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.


ನೀವು ನಿಮ್ಮಲ್ಲೇ ಭೇದಭಾವ ಮಾಡುತ್ತೀರಿ; ಅಲ್ಲದೆ ನೀವು ಮಾಡುವ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.


ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ನೀನು ನಿನ್ನ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಕೈಗೊಳ್ಳುವಂತೆ ಅವರು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಲಿ! ಇಸ್ರಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ!


ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;


ಸುಜ್ಞಾನದ ಮಾರ್ಗ ಬಲ್ಲವನು ದೇವರೇ ಅದರ ಸ್ಥಳಗೊತ್ತಿದೆ ಆತನೊಬ್ಬನಿಗೆ.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು.


ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು.


ತಾಯಿ ತನ್ನ ಮಕ್ಕಳನ್ನು ಸಾಕಿಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನುಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು.


“ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.


ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.


ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.


ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.


ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.


ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.


ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.


“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:


ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಆದರೆ ಸುಜ್ಞಾನ ಸಿಕ್ಕುವುದೆಲ್ಲಿ? ವಿವೇಕ ವಾಸಮಾಡುವುದೆಲ್ಲಿ?


ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,


ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಕೆಲಸಗಾರರೇ, ನಿಮ್ಮ ಮೇಲಿನ ಅಧಿಕಾರಿಗಳಿಗೆ ಅಧೀನರಾಗಿರಿ. ಅವರಿಗೆ ಪೂರ್ಣಮರ್ಯಾದೆಯನ್ನು ತೋರಿಸಿರಿ. ದಯಾವಂತರೂ ಹಿತಚಿಂತಕರೂ ಆಗಿರುವ ಅಧಿಕಾರಿಗಳಿಗೆ ಮಾತ್ರವಲ್ಲ, ಕಠಿಣವಾಗಿ ವರ್ತಿಸುವವರಿಗೂ ವಿಧೇಯರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು