Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:5 - ಕನ್ನಡ ಸತ್ಯವೇದವು C.L. Bible (BSI)

5 ನಾಲಿಗೆಯೂ ಹಾಗೆಯೇ. ಅದು ಶರೀರದ ಸಣ್ಣ ಅಂಗವಾಗಿದ್ದರೂ ಬಡಾಯಿ ಕೊಚ್ಚುವುದು ಬಹಳ. ಒಂದು ಸಣ್ಣ ಕಿಡಿಯು ದೊಡ್ಡ ಕಾಡನ್ನೇ ಸುಡಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ನಾಲಿಗೆಯೂ ಅದರಂತೆಯೆ. ಅದು ದೇಹದ ಒಂದು ಸಣ್ಣ ಭಾಗವಾದರೂ, ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಚಿಕ್ಕ ಬೆಂಕಿಯ ಕಿಡಿಯು ದೊಡ್ಡ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಸೆಚ್ ಜಿಬಿಲ್‌ಬಿ ಬಾರಿಕ್ ರ್‍ಹಾತಾ, ಖರೆ ಮೊಟೆ ಮೊಟೆ ಬಡಾಯ್ ಬೊಲ್ತಾ. ಚಿಂತುನ್ ಬಗಾ, ಎಕ್ ಬಾರಿಕ್ ಅಗಿಚಿ ಕಿಟ್ಟ್ ಸಗ್ಳಿ ಡಂಗಳ್ ಜಳಿ ಸರ್ಕೆ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:5
25 ತಿಳಿವುಗಳ ಹೋಲಿಕೆ  

ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.


ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.


ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರೂ ಅವರು ಆತನಿಗೆ, ‘ತೊಲಗಿಹೋಗು ನಮ್ಮಿಂದ’ ಎಂದರು.


ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.


ನಾ ಇಂತೆಂದುಕೊಂಡೆ : “ಜಾಗರೂಕನಾಗಿರುವೆ ಜಿಹ್ವೆ ಪಾಪಕ್ಕೆಳೆಯದಂತೆ I ಬಾಯಿಗೆ ಕುಕ್ಕೆ ಹಾಕಿಕೊಂಡಿರುವೆ ದುರ್ಜನರ ಮುಂದೆ” II


ಸೌದೆಯಿಲ್ಲದಿದ್ದರೆ ಬೆಂಕಿ ಆರುವುದು; ಚಾಡಿಕೋರನಿಲ್ಲದಿದ್ದರೆ ಜಗಳ ಶಮನವಾಗುವುದು.


ಅಂತೆಯೇ, ಹಡಗು ಎಷ್ಟೇ ದೊಡ್ಡದಿರಲಿ, ಎಂತಹ ಬಿರುಗಾಳಿಯ ಬಡಿತಕ್ಕೇ ಸಿಕ್ಕಿರಲಿ, ಕೇವಲ ಒಂದು ಚಿಕ್ಕ ಚುಕ್ಕಾಣಿಯಿಂದ ನಾವಿಕನು ತನಗೆ ಇಷ್ಟಬಂದ ಕಡೆಗೆ ಅದನ್ನು ತಿರುಗಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು