Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:14 - ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ಜೀವಮಾನವು ಎಂಥದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹಬೆಯಂತಿರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾಳೆ ಏನಾಗುವುದೋ ನಿಮಗೆ ತಿಳಿಯದು! ನಿಮ್ಮ ಜೀವನವು ಹಬೆಯಂತಿದೆ. ನೀವು ಅದನ್ನು ಸ್ವಲ್ಪಕಾಲ ನೋಡುವಿರಿ. ನಂತರ ಅದು ಅದೃಶ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಉದ್ದ್ಯಾ ಕಾಯ್ ಹೊತಾ ಮನ್ತಲೆ ತುಮ್ಕಾ ಗೊತ್ತ್ ನಾ! ತುಮ್ಚ್ಯಾ ಜಿವನಾತ್ ತುಮಿ ಉಬೆಚ್ಯಾ ಡುಕ್ಟಾಚ್ಯಾ ಸರ್ಕೆ ಹಾಸಿ. ತೊ ಉಲ್ಲೊ ಎಳ್ ತವ್ಡೊಚ್ ದಿಸ್ತಾ ಮಾನಾ ತೊ ತುಮ್ಕಾ ದಿಸಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:14
17 ತಿಳಿವುಗಳ ಹೋಲಿಕೆ  

ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.


ಮಾಯವಾಗುತ್ತಿದೆ ನನ್ನೀ ಜೀವಮಾನ ಹೊಗೆಯಂತೆ I ಉರಿಯುತ್ತಿವೆ ಎನ್ನೆಲುಬುಗಳು ಒಲೆಯಲ್ಲಿಟ್ಟ ಕೊರಡಿನಂತೆ II


ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ.


ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ ಮಗ್ಗದಿಂದ ಅವನು ದಾರವನ್ನು ಕತ್ತರಿಸುವಂತೆ ಬೆಳಗುಬೈಗಿನೊಳಗೆ ನನ್ನ ಆಯುಷ್ಯವನ್ನು ನೀ ಮುಗಿಸುತ್ತಿರುವೆನೆಂದೆ.


ನೆನೆದುಕೊಂಡನಾತ ಅವರು ಕೇವಲ ನರರೆಂದು I ತಿಳಿದುಕೊಂಡನು ಮರಳಿಬಾರದ ಉಸಿರವರೆಂದು II


ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II


ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸರ ಸಂಗಡ ಜೆರುಸಲೇಮಿಗೆ ಬರುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು