Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:2 - ಕನ್ನಡ ಸತ್ಯವೇದವು C.L. Bible (BSI)

2 ಪರರ ಆಸ್ತಿಪಾಸ್ತಿಗಳನ್ನು ಬಯಸುತ್ತೀರಿ; ಅವುಗಳು ಸಿಗದೆ ಇದ್ದಾಗ, ನೀವು ಕೊಲೆಮಾಡಲೂ ಹಿಂಜರಿಯುವುದಿಲ್ಲ. ದುರಾಶೆಗಳಿಗೆ ಬಲಿಯಾಗುತ್ತೀರಿ; ಅವುಗಳು ಈಡೇರದಾಗ ಜಗಳವಾಡುತ್ತೀರಿ, ಕಾದಾಡುತ್ತೀರಿ. ನಿಮಗೆ ಬೇಕಾದುದು ನಿಮ್ಮಲ್ಲಿಲ್ಲ. ಏಕೆಂದರೆ, ನೀವು ಅದಕ್ಕಾಗಿ ಬೇಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲೆಗಾರರಾಗುವಷ್ಟು ಹೊಟ್ಟೆಕಿಚ್ಚು ಪಟ್ಟಾದರೂ ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಯುದ್ಧಮಾಡುತ್ತೀರಿ. ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಅನೇಕ ವಸ್ತುಗಳಿಗಾಗಿ ಆಶಿಸುತ್ತೀರಿ. ಆದರೆ ಅವುಗಳನ್ನು ಪಡೆಯುವುದರಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನೀವು ಕೊಲೆ ಮಾಡುತ್ತೀರಿ ಮತ್ತು ಇತರರ ಬಗ್ಗೆ ಅಸೂಯೆಪಡುತ್ತೀರಿ. ಆದರೆ ನೀವು ಆಸೆಪಟ್ಟದ್ದನ್ನು ಇನ್ನೂ ಪಡೆಯಲಾರದವರಾಗಿರುವಿರಿ. ಆದ್ದರಿಂದ ನೀವು ವಾದವಿವಾದ ಮಾಡುವಿರಿ ಮತ್ತು ಹೊಡೆದಾಡುವಿರಿ. ನೀವು ದೇವರನ್ನು ಕೇಳಿಕೊಳ್ಳಲಿಲ್ಲ. ಆದ್ದರಿಂದಲೇ, ನೀವು ಆಸೆ ಪಟ್ಟದ್ದು ನಿಮಗೆ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ದೆವಾಕ್ಡೆ ಲೈ ಮಾಗ್ತ್ಯಾಸಿ ತೆ ತುಮ್ಕಾ ಗಾವಿನಾ, ತಸೆ ಹೊವ್ನ್ ತುಮಿ ಜಿವ್ ಕಾಡುಕ್ ಸೈತ್ ತಯಾರ್ ಹೊತ್ಯಾಶಿ. ಲೈ ಆಶಾ ಕರ್ತ್ಯಾಸಿ ಖರೆ ತೆ ತುಮ್ಕಾ ಗಾವಿನಾ ತಸೆ ಹೊವ್ನ್ ತುಮಿ ಝಗ್ಡೆ ಅನಿ ಮಾರಾ ಮಾರಿ ಕರ್ತ್ಯಾಸಿ ತುಮ್ಕಾ ಹೆ ಸಗ್ಳೆ ಗಾವಿನಾ. ಕಶ್ಯಾಕ್ ಮಟ್ಲ್ಯಾರ್ ತುಮಿ ಹೆ ಸಗ್ಳೆ ದೆವಾಕ್ಡೆ ಮಾಗಿನ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:2
14 ತಿಳಿವುಗಳ ಹೋಲಿಕೆ  

ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.


ಸೂರೆ ಮಾಡುವವರೆಲ್ಲರ ಪಾಡು ಇದುವೆ; ಕೊಳ್ಳೆಯು, ಕೊಳ್ಳೆಗಾರರ ಪ್ರಾಣವನ್ನೇ ಕೊಳ್ಳೆಮಾಡುತ್ತದೆ.


ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ಅದಕ್ಕೆ ಆಹಾಜನು, “ಇಲ್ಲ, ನಾನು ಗುರುತನ್ನು ಕೇಳುವುದಿಲ್ಲ, ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ” ಎಂದನು.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.


ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ.


ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು