Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:4 - ಕನ್ನಡ ಸತ್ಯವೇದವು C.L. Bible (BSI)

4 ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದ್ದರಿಂದ ಈ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ವಿಶ್ವಾಸಾನ್ ನಸಲ್ಲ್ಯಾ ಲೊಕಾನು! ಹ್ಯಾ ಜಗಾ ವೈರ್ ಆಶಾ ಕರ್ತಲೆ ಮಟ್ಲ್ಯಾರ್ ದೆವಾಚೊ ದುಸ್ಮನ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ಜಗಾಚೊ ಪ್ರೆಮ್ ಕರ್ತಲೊ, ಅಪ್ನಾಕ್ ದೆವಾಚೊ ದುಸ್ಮಾನ್ ಕರುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:4
24 ತಿಳಿವುಗಳ ಹೋಲಿಕೆ  

ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.


ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.


ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.


“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?


ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.


ಅನಂತರ ಸರ್ವೇಶ್ವರ ನನಗೆ ಹೇಳಿದ್ದೇನೆಂದರೆ: “ನನ್ನ ಜನರಾದ ಇಸ್ರಯೇಲಿನವರು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ಅವುಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ಬಯಸುತ್ತಾರೆ. ಆದರೂ ಸರ್ವೇಶ್ವರ ಅವರನ್ನು ಪ್ರೀತಿಸುತ್ತಾರೆ. ಇದಕ್ಕೆ ನಿದರ್ಶನವಾಗಿ, ನೀನು ಹೋಗಿ, ಜಾರನಿಗೆ ಪ್ರಿಯಳೂ ಮತ್ತು ವ್ಯಭಿಚಾರಿಣಿಯೂ ಆದ ಸ್ತ್ರೀಯೊರ್ವಳನ್ನು ಪ್ರೀತಿಸು.”


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.


ಶತ್ರುಗಳೆಲ್ಲರು ಸಿಕ್ಕಿಹೋಗುವರು ನಿನ್ನ ಕೈಗೆ I ಹಗೆಗಳೆಲ್ಲ ಸಿಕ್ಕಿಬೀಳುವರು ನಿನ್ನ ಬಲಗೈಗೆ II


ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?


ಮಾಟಗಾತಿಯ ಮಕ್ಕಳೇ, ವೇಶ್ಯೆ ವ್ಯಭಿಚಾರಿಗಳ ಸಂತಾನದವರೇ, ಬನ್ನಿ ಇಲ್ಲಿಗೆ.


ಕಂಡೊಡನೆ ಬೇಕು ನಿಮಗೆ ಚೋರರ ಕೂಟ I ಸಾಕಾಗಿಲ್ಲ ನಿಮಗೆ ಜಾರರ ಒಡನಾಟ II


“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು : ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ನೀನು ಸೂಳೆತನಮಾಡುವ ಪತಿವ್ರತೆ; ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!


ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು