ಯಾಕೋಬನು 4:6 - ಕನ್ನಡ ಸತ್ಯವೇದವು C.L. Bible (BSI)6 ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆಚ್ಯಾಸಾಟ್ನಿ ಪವಿತ್ರ್ ಪುಸ್ತಕ್ ಸಾಂಗ್ತಲ್ಯಾ ಸಾರ್ಕೆ “ದೆವ್ ಹಂಕಾರ್‍ಯಾಕ್ನಿ ವಿರೊದ್ ಕರ್ತಾ, ಖರೆ ಖಾಯ್ಲ್ ಹೊವ್ನ್ ಚಲ್ತಲ್ಯಾಕ್ನಿ ಕುರ್ಪಾ ದಿತಾ”. ಅಧ್ಯಾಯವನ್ನು ನೋಡಿ |