ಯಾಕೋಬನು 5:11 - ಕನ್ನಡ ಸತ್ಯವೇದವು C.L. Bible (BSI)11 ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಆಯ್ಕಾ! ಸೊಸುನ್ ಘೆತಲೊ ಧನ್ಯ್, ತುಮಿ ಜೊಬಾನ್ ಸೊಸುನ್ ಘೆಟಲ್ಲ್ಯಾ ವಿಶಯಾತ್ ಆಯಿಕ್ಲ್ಯಾಶಿ ಅನಿ ಆಕ್ರಿಕ್ ಸರ್ವೆಸ್ವರ್ ದೆವಾನ್ ಕಸೆ ತೆಕಾ ದಿಲ್ಲ್ಯಾನ್ ಮನ್ತಲೆ ತುಮ್ಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ದೆವ್ ಕರಾನಾನ್ ಅನಿ ದಯೆನ್ ಭರಲ್ಲೊ ಹಾಯ್. ಅಧ್ಯಾಯವನ್ನು ನೋಡಿ |
ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.