ಯಾಕೋಬನು 5:13 - ಕನ್ನಡ ಸತ್ಯವೇದವು C.L. Bible (BSI)13 ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿಮ್ಮಲ್ಲಿ ಬಾಧೆಪಡುವವನು ಇದ್ದಾನೋ? ಅವನು ದೇವರನ್ನು ಪ್ರಾರ್ಥಿಸಲಿ. ನಿಮ್ಮಲ್ಲಿ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆ ಹಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿಮ್ಮಲ್ಲಿ ತೊಂದರೆಗೆ ಒಳಗಾಗಿರುವವನು ಪ್ರಾರ್ಥಿಸಬೇಕು. ನಿಮ್ಮಲ್ಲಿ ಸಂತೋಷದಿಂದಿರುವವನು ಹಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷ ಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತುಮ್ಚ್ಯಾತ್ಲೊ ಕೊನ್‌ಬಿ ತರಾಸಾತ್ ರ್‍ಹಾಲ್ಯಾರ್? ತೆನಿ ಮಾಗ್ನಿ ಕರುಚೆ. ತುಮ್ಚ್ಯಾತ್ಲೆ ಕೊನ್ ಕುಶಿನ್ ಹಾಯ್, ತೆನಿ ಸುತ್ತಿಚಿ ಗಿತಾ ಗಾವುಚೆ. ಅಧ್ಯಾಯವನ್ನು ನೋಡಿ |
ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.