Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು; ಮತ್ತು ಪಾಪಮಾಡಿದವನಾಗಿದ್ದರೆ ಅದು ಪರಿಹಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ಕಾಯಿಲೆಯಲ್ಲಿರುವವನನ್ನು ಗುಣಪಡಿಸುತ್ತದೆ. ಪ್ರಭುವು ಅವನನ್ನು ಗುಣಪಡಿಸುತ್ತಾನೆ. ಒಂದುವೇಳೆ, ಆ ವ್ಯಕ್ತಿಯು ಪಾಪ ಮಾಡಿದ್ದರೆ, ಪ್ರಭುವು ಅವನನ್ನು ಕ್ಷಮಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ವಿಶ್ವಾಸಾನ್ ಕರಲ್ಲಿ ಮಾಗ್ನಿ ತೆಕಾ ಗುನ್ ಕರ್ತಾ ಅನಿ ಧನಿ ತೆಕಾ ಬರೊ ಕರ್ತಾ. ಅನಿ ಕೊನ್‍ಬಿ ಪಾಪ್ ಕರಲ್ಲೊ ರ್‍ಹಾಲ್ಯಾರ್ ಧನಿ ತೆಕಾ ಮಾಪ್ ಕರ್‍ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:15
18 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.


ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.


ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.


ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು.


ಇದನ್ನು ನೆನಪಿಗೆ ತಂದುಕೊಳ್ಳಿರಿ: ಪಾಪಿಯನ್ನು ದುರ್ಮಾರ್ಗದಿಂದ ಮರಳಿ ಸನ್ಮಾರ್ಗಕ್ಕೆ ತಂದವನು ತನ್ನ ಆತ್ಮವನ್ನು ನಿತ್ಯ ಮರಣದಿಂದ ತಪ್ಪಿಸಿ ತನ್ನ ಲೆಕ್ಕವಿಲ್ಲದ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು