Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:20 - ಕನ್ನಡ ಸತ್ಯವೇದವು C.L. Bible (BSI)

20 ಇದನ್ನು ನೆನಪಿಗೆ ತಂದುಕೊಳ್ಳಿರಿ: ಪಾಪಿಯನ್ನು ದುರ್ಮಾರ್ಗದಿಂದ ಮರಳಿ ಸನ್ಮಾರ್ಗಕ್ಕೆ ತಂದವನು ತನ್ನ ಆತ್ಮವನ್ನು ನಿತ್ಯ ಮರಣದಿಂದ ತಪ್ಪಿಸಿ ತನ್ನ ಲೆಕ್ಕವಿಲ್ಲದ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ಸರಿಯಾದ ಮಾರ್ಗಕ್ಕೆ ನಡೆಸುವವನು ಆ ಪಾಪಿಯ ಆತ್ಮವನ್ನು ಮರಣದಿಂದ ಪಾರುಮಾಡಿದವನೂ ಅನೇಕ ಪಾಪಗಳಿಗೆ ಕ್ಷಮಾಪಣೆಯಾಗುವಂತೆ ಮಾಡಿದವನೂ ಆಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವನು ಆ ಪಾಪ ಮಾಡಿದವನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ, ಅವನ ಆತ್ಮವನ್ನು ಮರಣದಿಂದಲೂ ತಪ್ಪಿಸಿ, ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತುಮ್ಕಾ ಯಾದ್ ರ್‍ಹಾಂವ್ದಿತ್, ಎಕ್ ಪಾಪಿ ಮಾನ್ಸಾಕ್ ತೊ ಚುಕುನ್ ಗೆಲ್ಲ್ಯಾಕ್ನಾ ಪಾಟಿ ಹನ್ತಲೊ ತೆಚ್ಯಾ ಆತ್ಮ್ಯಾಕ್ ರಾಕ್ತಾ ಅನಿ ಲೈ ಪಾಪಾಂಚಿ ಮಾಪಿ ಘೆವ್ನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:20
18 ತಿಳಿವುಗಳ ಹೋಲಿಕೆ  

ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.


ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ಆದರೂ ಈ ಸೇವೆಯ ಮೂಲಕ ನನ್ನ ಸ್ವಜನರಲ್ಲಿ ಪ್ರೇಮಾಸೂಯೆಯನ್ನು ಮೂಡಿಸಿ ಅವರಲ್ಲಿ ಬಹುಶಃ ಕೆಲವರನ್ನಾದರೂ ಉದ್ಧಾರದ ಮಾರ್ಗಕ್ಕೆ ತರಲು ಸಾಧ್ಯವಾದೀತೆಂದು ನಂಬುತ್ತೇನೆ.


ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.


ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯದ ಮಾರ್ಗವನ್ನು ಬಿಟ್ಟು ತಪ್ಪಿಹೋದಾಗ ಇನ್ನೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ,


ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.


ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ.


ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ಯಾರ ಪಾಪ ಪರಿಹಾರವಾಗಿದೆಯೋ I ಯಾರ ದ್ರೋಹ ವಿಮೋಚನೆಯಾಗಿದೆಯೋ - ಅವರೇ ಧನ್ಯರು II


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.


ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ.


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ತಪ್ಪನ್ನು ಮನ್ನಿಸುವವನು ಪ್ರೀತಿಯನ್ನು ಅರಸುತ್ತಾನೆ; ತಪ್ಪನ್ನು ಎತ್ತಿ ಆಡುವವನು ಆಪ್ತನನ್ನೂ ಕಳೆದುಕೊಳ್ಳುತ್ತಾನೆ.


ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು


ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು