Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:3 - ಕನ್ನಡ ಸತ್ಯವೇದವು C.L. Bible (BSI)

3 ನಿಮ್ಮ ಬೆಳ್ಳಿಬಂಗಾರಕ್ಕೆ ತುಕ್ಕುಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ಬೆಂಕಿಯಂತೆ ದಹಿಸಿಬಿಡುತ್ತದೆ. ಅಂತ್ಯಕಾಲಕ್ಕಾಗಿ ನೀವು ಬೆಂಕಿಯನ್ನೇ ಶೇಖರಿಸಿಟ್ಟುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಮಣ್ಣೇ ನಿಮಗೆ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ನುಂಗಿಬಿಡುವದು. ಅಂತ್ಯದಿವಸಗಳು ಬಂದರೂ ದ್ರವ್ಯವನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿಮ್ಮ ಬೆಳ್ಳಿಬಂಗಾರಗಳು ತುಕ್ಕು ಹಿಡಿಯುತ್ತವೆ. ನೀವು ತಪ್ಪಿತಸ್ಥರೆಂಬುದಕ್ಕೆ ಅದೇ ಸಾಕ್ಷಿಯಾಗಿದೆ. ಅವುಗಳ ತುಕ್ಕು ನಿಮ್ಮ ದೇಹವನ್ನು ಬೆಂಕಿಯಂತೆ ತಿಂದುಬಿಡುತ್ತವೆ. ನೀವು ಈ ಕೊನೆಯ ದಿನಗಳಲ್ಲಿ ನಿಮ್ಮ ಭಂಡಾರವನ್ನು ತುಂಬಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದಿವೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದುಬಿಡುವುದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮ್ಚ್ಯಾ ಸೊನ್ಯಾಕ್ ಅನಿ ಚಾಂದಿಕ್ ಜಂಕ್ ಧರ್ಲಾ, ಹೆ ಜಂಕ್ ತುಮ್ಚ್ಯಾ ವಿರೊದ್ ಎಕ್ ಸಾಕ್ಷಿ ಹೊವ್ನ್ ರ್‍ಹಾತಾ ಅನಿ ತೆ ಅಗಿ ಸಾರ್ಕೆ ತುಮ್ಚೆ ಮಾಸ್ ಖಾತಾ. ಆಕ್ರಿಚ್ಯಾ ದಿಸಾ ಸಾಟ್ನಿ ತುಮಿ ತುಮ್ಚಿ ಕಪಾಟಾತ್ ಭರುನ್ ಥವ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:3
19 ತಿಳಿವುಗಳ ಹೋಲಿಕೆ  

ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.


ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ಅವರ ಮಾತು ರಾಜ ಹುಣ್ಣಿನಂತೆ ಹರಡಿಕೊಳ್ಳುತ್ತದೆ. ಹುಮೆನಾಯ ಮತ್ತು ಫಿಲೇತ ಇಂಥವರ ಗುಂಪಿಗೆ ಸೇರಿದ್ದಾರೆ.


ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.


ನನ್ನ ಪ್ರಜೆಯ ಮೈ ಚರ್ಮವನ್ನು ಸುಲಿಯುವುದಲ್ಲದೆ ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಆವಿಗೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.


ಅವರ ಶತ್ರುಗಳು, ಕೊಲೆಗಡುಕರು ಅವರನ್ನು ಮುತ್ತಿ ನಸುಕುವಾಗ ಒಬ್ಬರು ಮತ್ತೊಬ್ಬರನ್ನು ತಿನ್ನುವುದು ಮಾತ್ರವಲ್ಲ, ತಮ್ಮ ಪುತ್ರಪುತ್ರಿಯರ ಮಾಂಸವನ್ನೇ ತಿನ್ನುವರು.’


ನನ್ನ ಮುಖವೆಲ್ಲ ಸುಕ್ಕುಹಿಡಿದಿದೆ ನನ್ನ ಸಣಕಲುತನವೆ ನನಗೆ ವಿರುದ್ಧ ಸಾಕ್ಷಿಯಾಗಿದೆ.


ಬಳಿಕ ಎಲ್ಲಾ ಜನರಿಗೆ, “ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ.


ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;


ಕೇಡು ಮಾಡುವ ಉದ್ದೇಶದಿಂದ ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು. ಹಾಗೆಯೇ ನೀನು ಈ ಕುಪ್ಪೆಯನ್ನಾಗಲಿ ಸ್ತಂಭವನ್ನಾಗಲಿ ದಾಟಿ ನನ್ನ ಬಳಿಗೆ ಬರಕೂಡದು, ಇದಕ್ಕೆ ಈ ಕುಪ್ಪೆ ಹಾಗೂ ಈ ಸ್ತಂಭವೇ ಸಾಕ್ಷಿ.


ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.


ಲಾಬಾನನು ಯಕೋಬನಿಗೆ, “ಈ ದಿನ ನಿನಗೂ ನನಗೂ ಆದ ಒಪ್ಪಂದಕ್ಕೆ ಈ ಕುಪ್ಪೆಯೇ ಸಾಕ್ಷಿ” ಎಂದು ಹೇಳಿದ ಕಾರಣ ಅದಕ್ಕೆ ‘ಗೆಲೇದ್’ ಎಂದು ಹೆಸರಾಯಿತು.


ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು