ಯಾಕೋಬನು 5:4 - ಕನ್ನಡ ಸತ್ಯವೇದವು C.L. Bible (BSI)4 ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಆಯ್ಕಾ ತುಮ್ಚ್ಯಾ ಸೆತಾತ್ಲಿ ಫೈರಾ ಕಾಪುಕ್ ಮನುನ್ ಯೆಲ್ಲ್ಯಾಂಚಿ ಮಜುರಿ ತುಮಿ ದಿವ್ಕನ್ಯಾಸಿ, ತೆನಿ ಬೊಬ್ ಮಾರುಕ್ ಲಾಗ್ಲಾತ್ ಅನಿ ಕಾತ್ರನಿಕ್ ಯೆಲ್ಲ್ಯಾ ಲೊಕಾಂಚಿ ಬೊಬ್ ದೆವಾಚ್ಯಾ ಸಗ್ಳ್ಯಾಚ್ಯಾನ್ಕಿ ಮೊಟ್ಯಾ ಧನಿಯಾಚ್ಯಾ ಕಾನಾರ್ ಪಡ್ಲಾ. ಅಧ್ಯಾಯವನ್ನು ನೋಡಿ |