Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:9 - ಕನ್ನಡ ಸತ್ಯವೇದವು C.L. Bible (BSI)

9 ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಹೋದರರೇ, ನೀವು ಒಬ್ಬರಮೇಲೊಬ್ಬರು ಗುಣಗುಟ್ಟಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಹತ್ತಿರದಲ್ಲೇ ನಿಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಹೋದರ ಸಹೋದರಿಯರೇ, ಒಬ್ಬರ ಮೇಲೊಬ್ಬರು ದೂರದಿರಿ. ನೀವು ದೂರುವುದನ್ನು ನಿಲ್ಲಿಸದಿದ್ದರೆ ದೋಷಿಗಳೆಂದು ನಿಮಗೆ ತೀರ್ಪು ನೀಡಲಾಗುವುದು. ನ್ಯಾಯಧಿಪತಿಯು ಬರಲು ಸಿದ್ಧನಾಗಿದ್ದಾನೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪ್ರಿಯರೇ, ನೀವು ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿರಿ. ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಾಜ್ಯಾ ಭಾವಾನು ಅನಿ ಭೆನಿಯಾನು, ಎಕಾಮೆಕಾಚ್ಯಾ ವಿರೊದ್ ಪುರ್‌ಪುರುನಕಾಸಿ, ಅಸಿ ತುಮ್ಚಿ ಝಡ್ತಿ ಹೊಯ್ನಾ. ಹಿತ್ತೆ ಬಗಾ ನ್ಯಾಯ್ ಕರ್ತಲೊ ಹುಂಬ್ಡ್ಯಾರ್ ಯೆವ್ನ್ ಇಬೆ ರ್‍ಹಾಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:9
21 ತಿಳಿವುಗಳ ಹೋಲಿಕೆ  

ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.


ಅಂತೆಯೇ ಇದೆಲ್ಲವನ್ನು ನೋಡುವಾಗ ನರಪುತ್ರನು ಸಮೀಪಿಸಿಬಿಟ್ಟಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ.


ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿ.


ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.


ನಾವು ಅಹಂಕಾರಿಗಳಾಗಿರಬಾರದು; ಒಬ್ಬರನ್ನೊಬ್ಬರು ಕೆಣಕಬಾರದು; ಒಬ್ಬರ ಮೇಲೊಬ್ಬರು ಹೊಟ್ಟೆಕಿಚ್ಚು ಪಡಬಾರದು.


ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.


“ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ನರಪುತ್ರನು ಸಮೀಪಿಸಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ.


ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ.


ಅನ್ನಕ್ಕಾಗಿ ಅಲೆದಾಡುವರು ಅತ್ತಿತ್ತಾ I ಹೊಟ್ಟೆತುಂಬದಿರೆ ಅಡ್ಡಾಡುವರು ಬೊಗಳುತ್ತಾ II


ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.


“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ನ್ಯಾಯವಿಧಿಗಳನ್ನು ಕೊಟ್ಟವರೂ ನ್ಯಾಯಾಧಿಪತಿಯೂ ಒಬ್ಬರೇ; ಅವರೇ ಉದ್ಧಾರಮಾಡುವುದಕ್ಕೂ ವಿನಾಶಗೊಳಿಸುವುದಕ್ಕೂ ಶಕ್ತರು. ಹೀಗಿರುವಲ್ಲಿ, ನಿನ್ನ ನೆರೆಯವನಿಗೆ ತೀರ್ಪುಕೊಡಲು ನೀನು ಯಾರು?


ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.


ಸಹೋದರರೇ, ಸಂಕಷ್ಟಗಳನ್ನು ತಾಳ್ಮೆಯಿಂದ ಸಹಿಸಿದ್ದಕ್ಕೆ ನಿದರ್ಶನ ಬೇಕೇ? ಪ್ರಭುವಿನ ಹೆಸರಿನಲ್ಲಿ ಬೋಧಿಸಿದ ಪ್ರವಾದಿಗಳನ್ನು ಸ್ಮರಿಸಿಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು