Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಯನ್ನು ಕರೆದು, ದೇವದರ್ಶನದ ಗುಡಾರದಿಂದ ಅವನ ಸಂಗಡ ಮಾತಾಡಿ, ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತಾಡಿ ಹೀಗಂದನು - ನೀನು ಇಸ್ರಾಯೇಲ್ಯರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಯನ್ನು ಕರೆದು ದೇವದರ್ಶನಗುಡಾರದೊಳಗಿಂದ ಅವನ ಸಂಗಡ ಮಾತಾಡಿದನು. ಯೆಹೋವನು ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯನ್ನು ಕರೆದು, ದೇವದರ್ಶನದ ಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:1
19 ತಿಳಿವುಗಳ ಹೋಲಿಕೆ  

ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರ ಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು:


ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.


ನೀವು ಮತ್ತು ನಿಮ್ಮ ಸಂತತಿಯವರು ಪ್ರತಿನಿತ್ಯವೂ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಈ ದಹನಬಲಿಯನ್ನು ಅರ್ಪಿಸಬೇಕು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.


ಮೋಶೆ ಗುಡಾರವನ್ನು ಪಾಳೆಯದ ಹೊರಗೆ ದೂರದಲ್ಲಿ ಹಾಕಿಸುತ್ತಿದ್ದನು. ಅದಕ್ಕೆ ‘ದೇವದರ್ಶನದ ಗುಡಾರ’ ಎಂದು ಹೆಸರಿಟ್ಟನು. ಸರ್ವೇಶ್ವರನಿಂದ ಉತ್ತರವನ್ನು ಬಯಸುತ್ತಿದ್ದವರೆಲ್ಲರು ಪಾಳೆಯದ ಹೊರಗಿದ್ದ ಆ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.


ಸರ್ವೇಶ್ವರ “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ಆ ಧರ್ಮಶಾಸ್ತ್ರವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧಿಸುವಂತೆ ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಮೋಶೆಗೆ ಹೇಳಿದರು.


ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟರು. ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರು ಅರ್ಪಿಸಬೇಕಾದುದನ್ನು ಸರ್ವೇಶ್ವರನಿಗೆ ಅರ್ಪಿಸಬೇಕೆಂದು ಮೋಶೆ ಆಜ್ಞಾಪಿಸಿ ಮೇಲ್ಕಂಡ ವಿಧಿಗಳನ್ನು ಕೊಟ್ಟನು.


ಅಂತೆಯೆ ದಹನಬಲಿಪ್ರಾಣಿಯನ್ನೂ ವಿಧಿಬದ್ಧವಾಗಿ ಸಮರ್ಪಿಸಿದನು.


ಅದನ್ನು ನೋಡಲು ಅವನು ಮುಂದಕ್ಕೆ ಬರುವುದನ್ನು, ಸರ್ವೇಶ್ವರ ಸ್ವಾಮಿ ಕಂಡರು. ಪೊದೆಯೊಳಗಿಂದ, “ಮೋಶೇ, ಮೋಶೇ,” ಎಂದು ದೇವರು ಕರೆದರು. ಅದಕ್ಕವನು, “ಇಗೋ, ಇದ್ದೇನೆ,” ಎಂದು ಉತ್ತರಕೊಟ್ಟನು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.


ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;


ಉಳಿ ಮುಂತಾದುದನ್ನು ಉಪಯೋಗಿಸದೆ ಹುಟ್ಟು ಕಲ್ಲುಗಳಿಂದಲೇ ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠವನ್ನು ಕಟ್ಟಿಸಬೇಕು.


ತಾನು ತಂದ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.


ಹೀಗೆ ಸಭಿಕರು ದಹನಬಲಿದಾನಕ್ಕಾಗಿ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆಗಾಗಿಯೇ ಕೊಡಲಾದುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು