Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:15 - ಕನ್ನಡ ಸತ್ಯವೇದವು C.L. Bible (BSI)

15 ಯಾಜಕನು ಅದನ್ನು ಬಲಿಪೀಠದ ಬಳಿಗೆ ತಂದು ಕುತ್ತಿಗೆ ಮುರಿದು ಬಲಿಪೀಠದ ಮೇಲೆ ಹೋಮಮಾಡಲಿ; ಅದರ ರಕ್ತವನ್ನು ಬಲಿಪೀಠದ ಪಕ್ಕದಲ್ಲಿ ಹಿಂಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಕುತ್ತಿಗೆ ಮುರಿದು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹಿಂಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾಜಕನು ಅದನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:15
10 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ರಕ್ಷಿಸೆನ್ನನು ಸಿಂಹದ ಬಾಯಿಂದ I ಬಿಡಿಸು ಕಾಡುಕೋಣದ ಕೊಂಬಿನಿಂದ II


ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ಹಾಗೆಯೇ ಆಯಿತು; ಅವನು ಮರುದಿವಸ ಮುಂಜಾನೆ ಎದ್ದು ತುಪ್ಪಟವನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.


ಎಂತಲೆ ಜನರವರ ಕಡೆ ತಿರುಗಿಕೊಳ್ಳುವರು I ನೀರಂತೆ ಅವರ ಮಾತನು ಹೀರಿಕೊಳ್ಳುವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು