Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:2 - ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮಲ್ಲಿ ಯಾರಾದರೂ ಸರ್ವೇಶ್ವರನಿಗೆ ಒಂದು ಪ್ರಾಣಿಯನ್ನು ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ ಆಡುಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಜ್ಞಾಪಿಸಬೇಕಾದದ್ದೇನಂದರೆ - ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅದನ್ನು ದನಗಳಿಂದಾಗಲಿ ಆಡುಕುರಿಗಳಿಂದಾಗಲಿ ತೆಗೆದುಕೊಂಡು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ನೀನು ಹೇಳಬೇಕಾದದ್ದೇನೆಂದರೆ, ನೀವು ಯೆಹೋವನಿಗೆ ಯಜ್ಞವನ್ನು ಕಾಣಿಕೆಯಾಗಿ ಅರ್ಪಿಸುವುದಾದರೆ ನೀವು ಸಾಕಿದ ಪಶುಗಳನ್ನೇ ಅರ್ಪಿಸಬೇಕು. ಅದು ದನವಾಗಲಿ ಕುರಿಯಾಗಲಿ ಆಡಾಗಲಿ ಆಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “ ‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:2
13 ತಿಳಿವುಗಳ ಹೋಲಿಕೆ  

ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಆತನ ನಾಮಕೆ ಘನತೆ ಗೌರವವನು ತನ್ನಿ I ಕಾಣಿಕೆಯೊಂದಿಗೆ ಆತನ ಮಂದಿರಕೆ ಬನ್ನಿ II


ಸರ್ವೇಶ್ವರ ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು; ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಕಡುಗೋಪಗೊಂಡನು; ಅವನ ಮುಖ ಸಿಂಡರಿಸಿತು.


ಕ್ರಮೇಣ ಕಾಯಿನನು ತಾನು ಬೆಳೆಸಿದ ಫಸಲಲ್ಲಿ ಕೆಲವನ್ನು ತಂದು ಸರ್ವೇಶ್ವರ ಸ್ವಾಮಿಗೆ ಕಾಣಿಕೆಯಾಗಿ ಸಮರ್ಪಿಸಿದನು.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿಬಿಟ್ಟರೆ ಸಾಕು,


ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.


ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.


ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.


ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;


ಅಂದಿನಿಂದ ನಿತ್ಯ ದಹನಬಲಿ ಮತ್ತು ಅಮಾವಾಸ್ಯೆ ಬಲಿ, ಸರ್ವೇಶ್ವರನ ಎಲ್ಲ ಉತ್ಸವದಿನಗಳಿಗೆ ನೇಮಕವಾದ ದಹನಬಲಿ ಹಾಗು, ಜನರು ಸ್ವಂತ ಇಚ್ಛೆಯಿಂದ ತಂದುಕೊಟ್ಟ ಬಲಿದಾನಗಳು, ಇವು ಸರ್ವೇಶ್ವರನಿಗೆ ಸಮರ್ಪಣೆಯಾಗುತ್ತಾ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು