ಯಾಜಕಕಾಂಡ 1:5 - ಕನ್ನಡ ಸತ್ಯವೇದವು C.L. Bible (BSI)5 ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿರುವ ಯಜ್ಞವೇದಿಗೆ ಸುತ್ತಲೂ ಎರಚಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿ |