Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:7 - ಕನ್ನಡ ಸತ್ಯವೇದವು C.L. Bible (BSI)

7 ಆರೋನನ ವಂಶಜರಾದ ಯಾಜಕರು ಬಲಿಪೀಠದ ಮೇಲೆ ಬೆಂಕಿಯನ್ನಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಜಕರಾದ ಆರೋನನ ಪುತ್ರರು ವೇದಿಕೆಯ ಮೇಲೆ ಬೆಂಕಿಯನ್ನಿಟ್ಟು ಅದರ ಮೇಲೆ ಕಟ್ಟಿಗೆಯನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯಾಜಕನಾದ ಆರೋನನ ಪುತ್ರರು ಬಲಿಪೀಠದ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:7
11 ತಿಳಿವುಗಳ ಹೋಲಿಕೆ  

ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.


ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿ ಇಳಿದು ಬಂದು ದಹನಬಲಿದ್ರವ್ಯಗಳನ್ನೂ ಬಲಿಮಾಂಸವನ್ನೂ ದಹಿಸಿಬಿಟ್ಟಿತು; ಸರ್ವೇಶ್ವರನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.


ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,


ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


ಮೋಶೆಗೆ ಸರ್ವೇಶ್ವರ ಹೀಗೆಂದರು:


ಕಟ್ಟಿಗೆಯನ್ನು ಪೀಠದ ಮೇಲೆ ಪೇರಿಸಿ, ಹೋರಿಯನ್ನು ವಧಿಸಿ ತುಂಡುಮಾಡಿ, ಅದರ ಮೇಲೆ ಇಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಬಲಿಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ,” ಎಂದು ಆಜ್ಞಾಪಿಸಿದನು.


ಎಲ್ಕಾನ, ಯೆರೋಹಾಮ, ಎಲೀಯೇಲ, ತೋಹ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು