Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:8 - ಕನ್ನಡ ಸತ್ಯವೇದವು C.L. Bible (BSI)

8 ಅದರ ಮೇಲೆ ಕಟ್ಟಿಗೆಯನ್ನು ಪೇರಿಸಬೇಕು. ಪ್ರಾಣಿಯ ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಅದರ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದರ ಮೇಲೆ ಕಟ್ಟಿಗೆಯನ್ನು ಒಟ್ಟಿ ಆ ತುಂಡುಗಳನ್ನೂ ತಲೆಯನ್ನೂ ಕೊಬ್ಬನ್ನೂ ಅದರ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆರೋನನ ವಂಶದವರಾದ ಯಾಜಕರು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಪಶುವಿನ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಯಾಜಕರಾದ ಆರೋನನ ಪುತ್ರರು ಅದರ ಭಾಗಗಳನ್ನು ಅಂದರೆ, ತಲೆಯನ್ನೂ ಮತ್ತು ಕೊಬ್ಬನ್ನೂ ಬಲಿಪೀಠದ ಮೇಲೆ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:8
9 ತಿಳಿವುಗಳ ಹೋಲಿಕೆ  

ಕಟ್ಟಿಗೆಯನ್ನು ಪೀಠದ ಮೇಲೆ ಪೇರಿಸಿ, ಹೋರಿಯನ್ನು ವಧಿಸಿ ತುಂಡುಮಾಡಿ, ಅದರ ಮೇಲೆ ಇಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಬಲಿಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ,” ಎಂದು ಆಜ್ಞಾಪಿಸಿದನು.


ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ; ಅವುಗಳಲ್ಲೊಂದನ್ನು ಆರಿಸಿಕೊಂಡು, ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿ ಹೊತ್ತಿಸಬಾರದು. ನಾನೂ ಇನ್ನೊಂದು ಹೋರಿಯನ್ನು ಹಾಗೆಯೇ ಕಡಿದು ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು.


ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನೂ ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.


ಆ ಬಲಿಪ್ರಾಣಿಯ ಈ ಭಾಗಗಳನ್ನು, ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ತೆಗೆದು ಸರ್ವೇಶ್ವರನಿಗೆ ಹೋಮಮಾಡಬೇಕು.


ಅಂಚಿನಲ್ಲಿ ಎಪ್ಪತ್ತೈದು ಮಿಲಿಮೀಟರ್ ದಿಂಡು ಕಟ್ಟಿತ್ತು; ನೈವೇದ್ಯ ಮಾಂಸವು ಪೀಠಗಳ ಮೇಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು