Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನಾದ ನಾನು ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಎಲ್ಲ ಆಜ್ಞೆಗಳನ್ನು ಜನರಿಗೆ ಬೋಧಿಸಬೇಕು. ಇದು ನಿಮ್ಮ ಕರ್ತವ್ಯ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ಮೋಶೆಯ ಮೂಲಕ ಇಸ್ರಾಯೇಲ್ಯರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವದೂ ನಿಮ್ಮ ಕರ್ತವ್ಯವಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಮೋಶೆಯ ಮೂಲಕ ಇಸ್ರೇಲ್ ಜನರಿಗೆ ಕೊಟ್ಟ ಎಲ್ಲಾ ಕಟ್ಟಳೆಗಳನ್ನು ಅವರಿಗೆ ಬೋಧಿಸುವುದು ನಿನ್ನ ಜವಾಬ್ದಾರಿಯಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಇಸ್ರಾಯೇಲರಿಗೆ ಯೆಹೋವ ದೇವರು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ, ಎಲ್ಲಾ ಕಟ್ಟಳೆಗಳನ್ನು ಬೋಧಿಸುವುದಕ್ಕಾಗಿಯೂ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:11
16 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಜನರು ಎದ್ದುನಿಂತ ನಂತರ ಅವರು ದೇವರ ಧರ್ಮಶಾಸ್ತ್ರವನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.


ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


“ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.


ಇವರು ಸರ್ವೇಶ್ವರನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಜುದೇಯ ನಾಡಿನಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.


ಸರ್ವೇಶ್ವರ ಆರಿಸಿಕೊಂಡ ಆ ಸ್ಥಳದಲ್ಲಿ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.


ಅವರು ಕೊಡುವ ಆದೇಶದ ಪ್ರಕಾರ ಹಾಗು ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಬಲಕ್ಕೆ ತಿರುಗಬಾರದು.


ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು