ಯಾಜಕಕಾಂಡ 10:15 - ಕನ್ನಡ ಸತ್ಯವೇದವು C.L. Bible (BSI)15 ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗಲೆಲ್ಲಾ ಯಾಜಕರಿಗಾಗಿ ಪ್ರತ್ಯೇಕಿಸಿ ಆರತಿಯೆತ್ತಿ ಸಮರ್ಪಿಸುವ ಆ ಎದೆಯ ಭಾಗವನ್ನು, ತೊಡೆಯನ್ನು ಸರ್ವೇಶ್ವರನ ಸನ್ನಿಧಿಗೆ ತರಬೇಕು. ಸರ್ವೇಶ್ವರನ ಆಜ್ಞಾನುಸಾರ ಅವು ನಿಮಗೂ ನಿಮ್ಮ ವಂಶಜರಿಗೂ ಸಲ್ಲತಕ್ಕದ್ದು. ಇದು ಶಾಶ್ವತ ನಿಯಮ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನೂ ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನೂ ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಜನರು ಪ್ರಾಣಿಗಳ ಕೊಬ್ಬನ್ನು ಅಗ್ನಿಯ ಮೂಲಕ ಹೋಮಮಾಡುವಾಗ, ಯಾಜಕರಿಗಾಗಿ ತೆಗೆದಿಟ್ಟ ತೊಡೆಯ ಭಾಗವನ್ನು ಮತ್ತು ನೈವೇದ್ಯವಾಗಿ ನಿವಾಳಿಸಬೇಕಾದ ಎದೆಯ ಭಾಗವನ್ನು ಯೆಹೋವನ ಸನ್ನಿಧಿಗೆ ತರಬೇಕು. ಅದು ನಿಮ್ಮ ಪಾಲಾಗಿರುವುದು. ಅದು ನಿನಗೂ ನಿನ್ನ ಮಕ್ಕಳಿಗೂ ಸೇರಿದ್ದು. ಯೆಹೋವನು ಆಜ್ಞಾಪಿಸಿದಂತೆ ಯಜ್ಞಗಳ ಆ ಭಾಗವು ಎಂದೆಂದೂ ನಿಮ್ಮ ಪಾಲಾಗಿರುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೈವೇದ್ಯವಾಗಿ ಅರ್ಪಿಸುವ ಎದೆಯನ್ನೂ ತೊಡೆಯನ್ನೂ ಅವರು ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನು ನೈವೇದ್ಯವಾಗಿ ನಿವಾಳಿಸುವುದಕ್ಕೆ ಯೆಹೋವ ದೇವರ ಸನ್ನಿಧಿಯಲ್ಲಿ ತರಬೇಕು. ಯೆಹೋವ ದೇವರು ಆಜ್ಞಾಪಿಸಿದ ಹಾಗೆ ಅದು ನಿನಗೂ, ನಿನ್ನೊಂದಿಗೆ ನಿನ್ನ ಪುತ್ರರಿಗೂ ನಿತ್ಯ ಕಟ್ಟಳೆಯಾಗಿ ಸಿಕ್ಕಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |