Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:2 - ಕನ್ನಡ ಸತ್ಯವೇದವು C.L. Bible (BSI)

2 ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಸನ್ನಿಧಿಯಲ್ಲಿ ಸಮರ್ಪಿಸಲಾಗಿ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಯೆಹೋವನಿಂದ ಬೆಂಕಿ ಹೊರಟುಬಂದು ಅವರಿಬ್ಬರನ್ನು ನಾಶಮಾಡಿತು. ಅವರು ಯೆಹೋವನ ಸನ್ನಿಧಿಯಲ್ಲಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟುಬಂದು ಅವರನ್ನು ದಹಿಸಿಬಿಟ್ಟಿತು. ಅವರು ಯೆಹೋವ ದೇವರ ಮುಂದೆ ಮರಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:2
25 ತಿಳಿವುಗಳ ಹೋಲಿಕೆ  

ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸರ್ವೇಶ್ವರನ ಸನ್ನಿಧಿಯಲ್ಲಿ ಬಹಿಷ್ಕೃತ ಅಗ್ನಿಯಿಂದ ಧೂಪಾರತಿ ಎತ್ತಿದುದರಿಂದ ಸತ್ತುಹೋದರು.


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


ಆಗ ಸರ್ವೇಶ್ವರ ಉಜ್ಜನ ಮೇಲೆ ಕೋಪಗೊಂಡರು. ಅಂಥ ಅಗೌರವಕ್ಕಾಗಿ ಅವನನ್ನು ದಂಡಿಸಿದರು. ಅವನು ಅಲ್ಲೇ ದೇವರ ಮಂಜೂಷದ ಬಳಿ ಸತ್ತುಬಿದ್ದನು.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ಆಕ್ಷಣವೇ ಆಕೆಯೂ ಸತ್ತು ಅವನ ಕಾಲಬಳಿ ಬಿದ್ದಳು. ಒಳಗೆ ಬಂದ ಯುವಕರು ಆಕೆಯೂ ಸತ್ತುಬಿದ್ದಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಪತಿಯ ಪಕ್ಕದಲ್ಲೇ ಸಮಾಧಿಮಾಡಿದರು.


ಈ ಮಾತುಗಳನ್ನು ಕೇಳಿದಾಕ್ಷಣವೇ ಅನನೀಯನು ಸತ್ತುಬಿದ್ದನು.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದುದರಿಂದ ಎಲ್ಲಾಜಾರ್ ಈತಾಮಾರರು ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.


ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.


ಮಂಜೂಷವನ್ನು ಮುಟ್ಟಿದ್ದಕ್ಕಾಗಿ ಕೂಡಲೇ ಸರ್ವೇಶ್ವರ ಉಜ್ಜನ ಮೇಲೆ ಉಗ್ರಕೋಪ ತಾಳಿ ಅವನನ್ನು ಕೊಂದುಹಾಕಿದರು. ದೇವರ ಸನ್ನಿಧಿಯಲ್ಲಿಯೇ ಅವನು ಮರಣ ಹೊಂದಿದನು.


ಅದಕ್ಕೆ ಎಲೀಯನು, “ನಾನು ದೈವಪುರುಷ ಹೌದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿ ಬಂದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.


ಅದಕ್ಕೆ ಎಲೀಯನು, “ನಾನು ದೈವಪುರುಷನಾಗಿ ಇರುವುದು ನಿಜವಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.


ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.


ಕೋರಹನನ್ನು ಸೇರಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದಲೇ ಸತ್ತವರ ಸಂಖ್ಯೆ 14,700:


ಆರೋನನ ಇಬ್ಬರು ಮಕ್ಕಳು ಸರ್ವೇಶ್ವರ ಸ್ವಾಮಿಯ ಸನ್ನಿಧಿಗೆ ಬಂದು ನಾಶವಾದ ಮೇಲೆ


ಮೋಶೆಯ ಅಪ್ಪಣೆಯ ಮೇರೆಗೆ ಅವರು ಬಂದು ಸತ್ತವರ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಹೊರಕ್ಕೆ ಹೊತ್ತುಕೊಂಡು ಹೋದರು.


ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು, ಆರೋನ, ನಾದಾಬ್ ಹಾಗೂ ಅಬೀಹೂ ಮತ್ತು ಇಸ್ರಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಸರ್ವೇಶ್ವರನಾದ ನನ್ನ ಬಳಿಗೆ ಬಂದು ದೂರದಲ್ಲೆ ನಿಂತು ಅಡ್ಡಬೀಳಬೇಕು.


ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.


ಅವನು ಮಾತಾಡಿ ಮುಗಿಸುವಷ್ಟರಲ್ಲೇ ಮತ್ತೊಬ್ಬನು ಬಂದು, “ದೇವರು ಆಕಾಶದಿಂದ ಬೆಂಕಿ ಸುರಿಸಿದರು. ಅದು ಕುರಿಗಳನ್ನೂ, ಕೂಲಿ ಆಳುಗಳನ್ನೂ ಸುಟ್ಟು ಭಸ್ಮಮಾಡಿತು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಅಂಥ ವ್ಯಕ್ತಿಗಳು ಸರ್ವೇಶ್ವರನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು