Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:3
46 ತಿಳಿವುಗಳ ಹೋಲಿಕೆ  

ನನ್ನ ಸನ್ನಿಧಿಗೆ ಬರುವ ಯಾಜಕರು ಕೂಡ ತಮ್ಮನ್ನೇ ಶುದ್ಧಪಡಿಸಿಕೊಳ್ಳಬೇಕು. ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದು ಹೇಳಿದರು.


ಆತನೆನಗೆ ಇಂತೆಂದ : “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.


ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ನೀವಿಬ್ಬರೂ ಚಿನ್ ಮರುಭೂಮಿಯಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟು ಬಂದ ಸ್ಥಳದ ಬಳಿಯಲ್ಲಿ, ಇಸ್ರಯೇಲರ ಮಧ್ಯೆ ನನಗೆ ವಿರೋಧವಾಗಿ ದ್ರೋಹಮಾಡಿದಿರಿ; ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದಲೇ ಹೀಗೆ ಆಗಬೇಕು.


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


“ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.


ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಸರ್ವೇಶ್ವರನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.


ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


“ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸಾಯುವರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ನಿನ್ನ ಸಂತತಿಯವರಲ್ಲಿ, ತಲತಲಾಂತರದವರೆಗೂ, ಯಾವ ಅಂಗವಿಕಲನೂ ದೇವ ಆಹಾರವನ್ನು ಸಮರ್ಪಿಸಲು ನನ್ನ ಸನ್ನಿಧಿಗೆ ಬರಬಾರದು. ಅಂಗವಿಕಲನು ಈ ಸೇವೆಯನ್ನು ವಹಿಸಿಕೊಳ್ಳಲೇಕೂಡದು.


ಇಲ್ಲವಾದರೆ ಅವನ ಸಂತತಿ ಸ್ವಜನರೊಳಗೆ ಅಪವಾದಕ್ಕೆ ಗುರಿಯಾಗುವುದು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಆಗ ನನಗೆ, ‘ದೀಕ್ಷಿತರ ಪ್ರಾಕಾರದ ಉತ್ತರ ದಕ್ಷಿಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾದವು; ಅಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ, ಮತ್ತು ಧಾನ್ಯನೈವೇದ್ಯ ದೋಷಪರಿಹಾರಕಬಲಿದ್ರವ್ಯ, ಪ್ರಾಯಶ್ಚಿತ್ತಬಲಿದ್ರವ್ಯ ಎಂಬೀ ಮಹಾಪರಿಶುದ್ಧ ಪದಾರ್ಥಗಳನ್ನು ಅಲ್ಲಿಡುತ್ತಾರೆ. ಆ ಸ್ಥಳ ಪರಿಶುದ್ಧ.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


‘ಪಿತನೇ, ನಿಮ್ಮ ನಾಮ ಮಹಿಮೆಯನ್ನು ಬೆಳಗಿಸಿ’ “ ಎಂದು ನುಡಿದರು. ಆಗ, “ಹೌದು, ಆ ಮಹಿಮೆಯನ್ನು ಬೆಳಗಿಸಿದ್ದೇನೆ, ಪುನಃ ಬೆಳಗಿಸುತ್ತೇನೆ,” ಎಂಬ ಸ್ವರ್ಗೀಯ ವಾಣಿ ಕೇಳಿಸಿತು.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಆಗ ರಾಜ ಹಿಜ್ಕೀಯನು ಹೇಗೂ ತನ್ನ ಜೀವಮಾನದಲ್ಲಿ ಶಾಂತಿ ಸೌಭಾಗ್ಯ ಇರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ನೀನು ತಿಳಿಸಿದ ಸರ್ವೇಶ್ವರ ಸ್ವಾಮಿಯ ಮಾತು ಹಿತಕರವಾದುದು,” ಎಂದು ಉತ್ತರಕೊಟ್ಟನು.


ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು


ಅಲ್ಲದೆ ಆರೋನನು ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.


ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.


ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II


ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.


ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.


ಸರ್ವೇಶ್ವರ ಅವನಿಗೆ, “ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರು ಹಾಗು ಜನರು ಆ ಮೇರೆಯನ್ನು ದಾಟಿ ನನ್ನ ಹತ್ತಿರ ಬರಕೂಡದು; ದಾಟಿ ಬಂದರೆ ಅವರನ್ನು ತಟ್ಟನೆ ನಾಶಮಾಡಬಹುದು ಎಂದು ಹೇಳು,” ಎಂದರು.


ಸಾಕು ಮಾಡು ನಿನ್ನ ಕೈ ಹೊಡೆತವನು I ಅದರಿಂದ ನಾ ಸಾಯುತ್ತಿರುವೆನು II


ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು