ಯಾಜಕಕಾಂಡ 10:7 - ಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರನ ಅಭಿಷೇಕತೈಲ ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು, ಹೋದರೆ ಸಾಯುವಿರಿ,” ಎಂದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ದೇವದರ್ಶನದ ಗುಡಾರದ ಬಾಗಲನ್ನು ಬಿಟ್ಟು ಹೋಗಬಾರದು; ಹೋದರೆ ಸತ್ತೀರಿ ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ನೀವು ದೇವದರ್ಶನಗುಡಾರದ ಬಾಗಿಲನ್ನು ಸಹ ಬಿಟ್ಟುಹೋಗಬಾರದು. ಇಲ್ಲವಾದರೆ ನೀವು ಸಾಯುವಿರಿ! ಯಾಕೆಂದರೆ, ಯೆಹೋವನ ಅಭಿಷೇಕತೈಲವು ನಿಮ್ಮ ಮೇಲಿದೆ” ಎಂದು ಹೇಳಿದನು. ಆದ್ದರಿಂದ ಆರೋನ, ಎಲ್ಲಾಜಾರ್ ಮತ್ತು ಈತಾಮಾರ್ ಮೋಶೆಯ ಮಾತಿಗೆ ವಿಧೇಯರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಮರಣ ಹೊಂದದಂತೆ ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು. ಏಕೆಂದರೆ ಯೆಹೋವ ದೇವರ ಅಭಿಷೇಕ ತೈಲವು ನಿಮ್ಮ ಮೇಲಿದೆ,” ಎಂದನು. ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು. ಅಧ್ಯಾಯವನ್ನು ನೋಡಿ |
ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.